ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ ಪಾಲಿಕೆ ಮೇಯರ್‌, ಉಪಮೇಯರ್‌ ಚುನಾವಣೆ ಮುಂದಕ್ಕೆ

Published 27 ಮಾರ್ಚ್ 2024, 16:11 IST
Last Updated 27 ಮಾರ್ಚ್ 2024, 16:11 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್‌ ಮತ್ತು ಉಪ ಮೇಯರ್‌ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಿ ಕಲಬುರಗಿ ಪ್ರಾದೇಶಿಕ ಆಯುಕ್ತರು ಬುಧವಾರ ಆದೇಶ ಹೊರಡಿಸಿದ್ದಾರೆ. 

ಮೇಯರ್‌, ಉಪಮೇಯರ್‌ ಮತ್ತು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಮಾರ್ಚ್‌ 28ಕ್ಕೆ ನಿಗದಿ ಮಾಡಲಾಗಿತ್ತು. 

ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಮತ್ತು ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣದಿಂದ ಮೇಯರ್‌ ಚುನಾವಣೆಯನ್ನು ಮುಂದೂಡಬೇಕು ಎಂದು ಪಾಲಿಕೆಯ ಆಯುಕ್ತರು ಕಲಬುರಗಿಯ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿದ್ದರು ಎನ್ನಲಾಗಿದೆ. 

ಪಾಲಿಕೆ ಆಯುಕ್ತರ ಮನವಿಗೆ ಸಮ್ಮತಿಸಿರುವ ಪ್ರಾದೇಶಿಕ ಆಯುಕ್ತರು ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಚುನಾವಣಾ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾದೇಶಿಕ ಆಯುಕ್ತರು ತಮ್ಮ ಆದೇಶದಲ್ಲಿ ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT