ಬಳ್ಳಾರಿ: ನಗರದ ಕಪ್ಪುಗಲ್ಲು ರಸ್ತೆಯ 9ನೇ ಕ್ರಾಸ್ನಲ್ಲಿ ಅಪರಿಚಿತರು ಎರಡು ಹಸುಗಳ ತಲೆ ಕಡಿದು ರಸ್ತೆಗೆ ಎಸೆದಿದ್ದಾರೆ.

ಬೆಳಿಗ್ಗೆ ರಸ್ತೆಯಲ್ಲಿ ಹಸುಗಳ ತಲೆಗಳು ಬಿದ್ದಿರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಘಟನೆಗೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ಮುಖಂಡರು ಹಾಗೂ ವಿವಿಧ ಹಿಂದು ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಬಂದು ಕೃತ್ಯ ಖಂಡಿಸಿದರು. ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ದುಷ್ಕೃತ್ಯ ಎಸಗಿದವರ ಪತ್ತೆಗೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಈ ಘಟನೆ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.