ಬಳ್ಳಾರಿ: ‘ಪರಿಶಿಷ್ಟರು ಆರ್ಥಿಕವಾಗಿ ಸ್ಥಿತಿ ಸುಧಾರಣೆಯಾಗಲು, ಅವರ ಪ್ರಮಾಣಕ್ಕನುಸಾರವಾಗಿ ರಾಜ್ಯ ಸರ್ಕಾರವು ಆಯವ್ಯಯದಲ್ಲಿ ವಿಶೇಷ ಅನುದಾನ ಮೀಸಲಿಟ್ಟಿದೆ. ಅಧಿಕಾರಿಗಳು ಅವರಿಗಾಗಿಯೇ ಪೂರ್ಣ ಪ್ರಮಾಣದಲ್ಲಿ ವ್ಯಯಿಸಬೇಕು’ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ಅನುಷ್ಠಾನ ಕುರಿತು ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿನ ಪರಿಶಿಷ್ಟ ಸಮುದಾಯದ ರೈತರ ಮಾಹಿತಿ ನೀಡಬೇಕು. ಎಸ್ಸಿಎಸ್ಪಿ, ಟಿಎಸ್ಪಿ ಅನುದಾನದಡಿ ಕೃಷಿ, ತೋಟಗಾರಿಕೆ ಇಲಾಖೆಗಳು ಸೌಲಭ್ಯ ಮತ್ತು ಉಪಕರಣಗಳನ್ನು ಯುವ ರೈತರಿಗೆ ನೀಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿ‘ಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಇದರ ಮೇಲ್ವಿಚಾರಣೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿ, ಪ್ರಗತಿ ನಡೆಸಲಾಗುವುದು. ಕೊನೆಯಲ್ಲಿ ರಾಜ್ಯಮಟ್ಟದ ಎಸ್ಸಿಎಸ್ಪಿ ಟಿಎಸ್ಪಿ ಅನುದಾನ ಕುರಿತು ಪರಿಶೀಲನೆಯಾಗಲಿದೆ. ಹಾಗಾಗಿ ಪೂರಕ ಮಾಹಿತಿ ಇಟ್ಟುಕೊಳ್ಳಬೇಕು’ ಎಂದು ನೋಡಲ್ ಅಧಿಕಾರಿ ಆದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ಅನುದಾನದ ಮರುಹಂಚಿಕೆ: ‘ಯೋಜನೆಯಡಿ ಹಂಚಿಕೆ ಮಾಡಿರುವ ಮೊತ್ತವು ಖರ್ಚಾಗದೇ ಉಳಿದ ಸಂದರ್ಭದಲ್ಲಿ ಮಾರ್ಚ್ ಅಂತ್ಯದೊಳಗೆ ಅನುದಾನ ಖರ್ಚು ಮಾಡಬೇಕು. ಇಲ್ಲವಾದಲ್ಲಿ ಲೆಕ್ಕ ಪರಿಶೋಧನೆಯಾದ ಬಳಿಕ ಅದರ ಮುಂದಿನ ಹಣಕಾಸು ವರ್ಷಕ್ಕೆ ರಾಜ್ಯ ಸರ್ಕಾರದಿಂದ ಸೇರ್ಪಡೆಯಾಗುತ್ತದೆ. ಆದರೆ ಕೇಂದ್ರದ ಹಣ ಮರಳುವುದಿಲ್ಲ’ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಎಚ್ಚರಿಸಿದರು.

‘ಕಾರ್ಯಕ್ರಮಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದಲ್ಲಿ ಶಿಸ್ತುಕ್ರಮ ಜರುಗಿಸಲಾಗುತ್ತದೆ’ ಎಂದು ಅವರು ತಿಳಿಸಿದರು.

‘ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ ವಿನಿಯೋಗಿಸಬೇಕು. ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಒದಗಿಸಿದ ಅನುದಾನವನ್ನು ಪರಿಶಿಷ್ಟರ ಏಳಿಗೆಗಾಗಿ ತಲುಪಿಸುವಲ್ಲಿ ತೊಂದರೆಗಳಿದ್ದಲ್ಲಿ ತಿಳಿಸಬೇಕು. ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಹೇಳಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಜೆಜೆಎಂ ಕಾಮಗಾರಿ ಪ್ರಗತಿ ಪರಿಶೀಲಿಸಿದ ಅವರು, ‘ರಾಜ್ಯ ಸರ್ಕಾರದಿಂದ ಎರಡು ಬಾರಿ ಅನುದಾನ ಬಿಡುಗಡೆಯಾಗಿದ್ದರೂ, ಯಾವುದೇ ರೀತಿಯ ಹಣ ಬಳಕೆಯಾಗಿಲ್ಲ ಮತ್ತು ಕಾಮಗಾರಿ ಪ್ರಗತಿಯಾಗಿಲ್ಲ. ಯೋಜನೆಯ ಮೇಲೆ ಉದಾಸೀನತೆ ತೋರುತ್ತಿದ್ದೀರಿ’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿ.ಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.