ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ಈ ಸಾಲಿನ ಮೇಯರ್, ಉಪ ಮೇಯರ್ ಸ್ಥಾನದ ಮೀಸಲಿಗೆ ಸಂಬಂಧಿಸಿದ ವಿಚಾರಣೆಯೂ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ.

ಮೀಸಲು ನಿಗದಿ ಮಾಡಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿ ಪಾಲಿಕೆ ಕಾರ್ಪೊರೇಟರ್ ಬಿ. ಮುಬಿನ್ ಧಾರವಾಡ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಮುಂದಿನ ವಿಚಾರಣೆ ನಡೆಯುವವರೆಗೆ ಮೇಯರ್ ಚುನಾವಣೆಗೆ ಸಂಬಂಧಿಸಿದ ಯಾವುದೇ ಬೆಳವಣಿಗೆ ನಡೆಯಬಾರದು ಎಂದು ಕೋರ್ಟ್ ಹೇಳಿತ್ತು. ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿ ಮಾಡಲಾಗಿತ್ತು.

ಆದರೆ, ಮಂಗಳವಾರ ಪ್ರಕರಣ ವಿಚಾರಣೆ ನಡೆಯಲೇ ಇಲ್ಲ. ಹೀಗಾಗಿ ಮುಂದಿನ ವಿಚಾರಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಮುಂದಿನ ದಿನಾಂಕ ಶೀಘ್ರವೇ ಪ್ರಕಟಗೊಳ್ಳಲಿದೆ ಎಂದು ಅರ್ಜಿದಾರರ ಪರ ವಕೀಲ ಚೇತನ್ ಲಿಂಬಿಕಾಯಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.