ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಪೊಲೀಸ್ ಕಾನ್ಸ್‌ಟೇಬಲ್ ಅನುಮಾನಾಸ್ಪದವಾಗಿ ಸಾವು

Last Updated 23 ಮಾರ್ಚ್ 2023, 3:49 IST
ಅಕ್ಷರ ಗಾತ್ರ

ಬಳ್ಳಾರಿ: ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಪೊಲೀಸ್ ಕಾನ್ಸ್‌ಟೇಬಲ್ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜಾಫರ್ ಮೃತ ಕಾನ್ಸ್ ಟೇಬಲ್. ಪೊಲೀಸ್‌ ವಸತಿ ಗೃಹದಲ್ಲಿ ಬುಧವಾರ ರಾತ್ರಿ ಇವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕಿವಿಯಲ್ಲಿ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗಾಂಧಿನಗರ ಪೊಲೀಸರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

2009 ರಲ್ಲಿ ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಆಗಿ ನೇಮಕವಾಗಿದ್ದ ಜಾಫರ್, 2ನೇ ಮದುವೆಯಾಗಿದ್ದರು. 2ನೇ ಪತ್ನಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರ ಮೊದಲ ಹೆಂಡತಿ ಮುಸ್ಲಿಂ, ಎರಡನೇ ಹೆಂಡತಿ ಹಿಂದು ಎಂಬ ಮಾಹಿತಿ ಲಭ್ಯವಾಗಿದೆ. ಮೊದಲ ಹೆಂಡತಿಯನ್ನು ತವರು ಮನೆಯಲ್ಲಿ ಬಿಟ್ಟಿದ್ದ ಇವರು ಕಳೆದ ಕೆಲವು ದಿನಗಳ ಹಿಂದೆ 2ನೇ ಪತ್ನಿ ಜತೆಗೂ ಜಗಳ ಮಾಡಿಕೊಂಡಿದ್ದರಂತೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT