ಬಳ್ಳಾರಿ: ಗುರುವಾರ ಒಂದೇ ದಿನ ಎರಡು ಘರ್ಷಣೆಗಳು ನಡೆದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರ ಅವ್ವಂಬಾವಿಯ ನಿವಾಸದ ಬಳಿ ಭಾರಿ ಬಂದೋಬಸ್ತ್ ಮಾಡಲಾಗಿದೆ.

ವಾಲ್ಮೀಕಿ ಪ್ರತಿಮೆ ಇರಿಸಿರುವ ನಗರದ ವಾಲ್ಮೀಕಿ ವೃತ್ತದ ಬಳಿಯ ಭದ್ರತೆ ಹೆಚ್ಚಿಸಲಾಗಿದೆ.

ನಗರದಲ್ಲಿ ಪ್ರಕ್ಷುಬ್ಧತೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ವಿಜಯನಗರ, ಚಿತ್ರದುರ್ಗ, ಕೊಪ್ಪಳ ಎಸ್ಪಿಗಳನ್ನು, ಪೊಲೀಸ್ ಸಿಬ್ಬಂದಿಯನ್ನು ಬಳ್ಳಾರಿಗೆ ಕರೆಸಿಕೊಳ್ಳಲಾಗಿದೆ. ಹೀಗಾಗಿ ನಗರದ ಎಲ್ಲ ಕಡೆ ಪೊಲೀಸರ ದಂಡೇ ಕಾಣುತ್ತಿದೆ.

ಇಬ್ಬರಿಂದಲೂ ಒಂದೇ ಸಮಯಕ್ಕೆ ಪತ್ರಿಕಾಗೋಷ್ಠಿ

ಘಟನೆ ಸಂಬಂಧಿಸಿದಂತೆ ವಿವರಣೆ ನೀಡಲು ಶಾಸಕ ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ಇಬ್ಬರೂ ಬೆಳಿಗ್ಗೆ 10.30ಕ್ಕೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.
.ಜನಾರ್ದನ ರೆಡ್ಡಿ ಮನೆ ಎದುರು ಗಲಾಟೆ: ಕಾಂಗ್ರೆಸ್ ಕಾರ್ಯಕರ್ತ ಬಲಿ, ನಿಷೇಧಾಜ್ಞೆ.ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ.

ವಿಮ್ಸ್ಗೆ ಭೇಟಿ

ಗುರುವಾರ ರಾತ್ರಿ ನಡೆದ ಎರಡನೇ ಘರ್ಷಣೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಅಂತಿಮ ದರ್ಶನ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ನಗರ ಶಾಸಕ ನಾರಾ ಭರತ್ ರೆಡ್ಡಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.