ಬಳ್ಳಾರಿ: ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಶುಕ್ರವಾರ ನಡೆಯಲಿದ್ದು, ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಸೇರಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
‘ರಂಗಭೂಮಿ, ಕಲೆ, ಸಮಾಜ ಸೇವೆಯನ್ನು ಪರಿಗಣಿಸಿ ಉಮಾಶ್ರೀ ಡಾಕ್ಟರೇಟ್ ನೀಡಲಾಗುತ್ತಿದೆ’ ಎಂದು ವಿವಿ ತಿಳಿಸಿದೆ.
ಬಳ್ಳಾರಿಯ ವಿಭೂತಿಗುಡ್ಡ ಮೈನಿಂಗ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾಗಿದ್ದ ಎಸ್.ಕೆ ಮೋದಿ (ಕೈಗಾರಿಕೆ ಮತ್ತು ಸಮಾಜ ಸೇವೆ) ಮತ್ತು ತೆಗ್ಗಿನಮಠದ ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
ರಾಜ್ಯಪಾಲರು ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವುದಿಲ್ಲ. ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಭಾಗವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.