ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಧುನಿಕ ಕೃಷಿಯಿಂದ ಉತ್ತಮ ಇಳುವರಿ: ಎಚ್.ಟಿ.ಸುನಿಲ್ ಕುಮಾರ್

Published 23 ಡಿಸೆಂಬರ್ 2023, 15:44 IST
Last Updated 23 ಡಿಸೆಂಬರ್ 2023, 15:44 IST
ಅಕ್ಷರ ಗಾತ್ರ

ಕೂಡ್ಲಿಗಿ: ರೈತರಿಲ್ಲದೆ ಪ್ರಪಂಚದ ಜೀವನ ಮತ್ತು ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಟಿ.ಸುನಿಲ್ ಕುಮಾರ್ ಹೇಳಿದರು.

ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ತಾಲ್ಲೂಕು ಕೃಷಿಕ ಸಮಾಜ ಮತ್ತು ಕೃಷಿ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಹಾಗೂ ಕಿಸಾನ್ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಲಕರಣೆಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಲಭ್ಯವಾಗುವಂತೆ ರೈತರಿಗೆ ಶಿಕ್ಷಣ ನೀಡುವುದು ಸಹ ಅಗತ್ಯವಾಗಿದೆ. ಸರ್ಕಾರವು ಕಾಲಕಾಲಕ್ಕೆ ರೈತರಿಗಾಗಿ ವಿವಿಧ ಯೋಜನೆಗಳನ್ನು ರೂಪಿಸುತ್ತದೆ ಹಾಗೂ ಅವರಿಗೆ ಪ್ರಯೋಜನಗಳನ್ನು ನೀಡಲು ಅನೇಕ ಕೃಷಿ ಕಾರ್ಯಕ್ರಮಗಳನ್ನು  ಆಯೋಜಿಸುತ್ತದೆ. ಇದರ ಪ್ರಯೋಜನವನ್ನು ರೈತರು ಪಡೆದು, ಆಧುನಿಕ ಕೃಷಿಯೊಂದಿಗೆ ಉತ್ತಮ ಇಳುವರಿ ಪಡೆಯಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಕೃಷಿಕ ಸಮಾಜದ ಅದ್ಯಕ್ಷ ಎಂ.ಜಿ.ಸಿದ್ದನಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನಂದಿ ಜಂಬಣ್ಣ, ಪ್ರಧಾನ ಕಾರ್ಯದರ್ಶಿ ಎಂ.ಬಸವರಾಜ, ಸದಸ್ಯರಾದ ಕೆ.ಸಿದ್ದಪ್ಪ, ನೇತ್ರಾವತಿ, ಎರ್ರಿಸ್ವಾಮಿ, ರೈತ ಸಂಘದ ರಾಜ್ಯ ಕಾರ್ಯದರ್ಶಿ ದೇವಮನೆ ಮಹೇಶ, ಎಫ್‍ಪಿಒ ಆರ್.ಕೆ.ನಾಗರಾಜ, ಹನುಮಂತಪ್ಪ, ಸಹಾಯಕ ಕೃಷಿ ಅಧಿಕಾರಿ ಗುರುಬಸವರಾಜ ಚಿಲಗೋಡು, ತಾಂತ್ರಿಕ ಅಧಿಕಾರ್ ಶ್ರವಣ್ ಕುಮಾರ್ ಪಾಲ್ಗೊಂಡಿದ್ದರು.

ತಾಲ್ಲೂಕು ಮಟ್ಟದ ಉತ್ತಮ ಶ್ರೇಷ್ಠ ಕೃಷಿಕ ಪುರಸ್ಕೃತ ಬೊಮ್ಮಯ್ಯ, ಈಶ್ವರಮ್ಮ, ಕಡೆಮನಿ ಭರಮಪ್ಪ, ಆರ್.ಎಂ.ಗುರುಬಸವರಾಜ, ಒಂಟಿ ಪಾಲಪ್ಪ, ಹೆಗ್ಗಪ್ಪ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT