ಹರಪನಹಳ್ಳಿ: ತಾಲ್ಲೂಕಿನ ಬೆಣ್ಣೆಹಳ್ಳಿಯ ಕಡಕೋಳ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಪಶು ವೈದ್ಯ ಪರಿವೀಕ್ಷಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.
ಎನ್.ಶೀರನಹಳ್ಳಿಯ ಪಶುವೈದ್ಯ ಪರಿವೀಕ್ಷಕ ನಾಗರಾಜ್(46) ಮೃತ ದುರ್ದೈವಿ. ಬಾಗಳಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದಲ್ಲಿ ನಿಯೋಜನೆ ಮೇಲೆ ಕೆಲಸ ಮಾಡುತ್ತಿದ್ದರು.
ಭಾನುವಾರ ತಮ್ಮ ಸ್ವಗ್ರಾಮ ಎನ್.ಶೀರನಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಲಾರಿ ಚಾಲಕ ತಲೆಮರೆಸಿಕೊಂಡಿದ್ದಾನೆ. ಚಿಗಟೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.