ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡ್ಲಿಗಿ: ಮತದಾನ ಜಾಗೃತಿಗಾಗಿ ಬೈಕ್ ಜಾಥಾ

Published 23 ಏಪ್ರಿಲ್ 2024, 16:00 IST
Last Updated 23 ಏಪ್ರಿಲ್ 2024, 16:00 IST
ಅಕ್ಷರ ಗಾತ್ರ

ಕೂಡ್ಲಿಗಿ: ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳಿಂದ ಪಟ್ಟಣದಲ್ಲಿ ಮಂಗಳವಾರ ಮತದಾನ ಜಾಗೃತಿಗಾಗಿ ಬೈಕ್ ಜಾಥಾ ನಡೆಯಿತು.

ಪಟ್ಟಣದ ಎಸ್‍ಎವಿಟಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾಥಾಕ್ಕೆ ಸ್ವೀಪ್ ಸಮಿತಿ ಅಧ್ಯಕ್ಷ ವೈ. ರವಿ ಕುಮಾರ್ ಹಸಿರು ನಿಶಾನೆ ತೋರಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಿ. ಶಿವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಕರಣಂ ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಬಿ. ಶಿವಾನಂದ, ತಾಲ್ಲೂಕು ಅಧ್ಯಕ್ಷ ಕೊಟ್ರಗೌಡ, ಉಪಾಧ್ಯಕ್ಷೆ ಎಚ್. ಇಂದಿರಾ, ಕಾರ್ಯಾದರ್ಶಿ ಟಿ.ಎಚ್.ಎಂ. ಶೇಖರಯ್ಯ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ವಿ. ಸಿದ್ದಾರಾಧ್ಯ, ಬಾಸ್ಕರ್ ನಾಯ್ಕ್, ಎಸ್.ವೆಂಕಟೇಶ್, ಶಶಿಧರ, ಪಿ.ವಿ. ಕೊತ್ಲಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT