ಹರಪನಹಳ್ಳಿ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ ಘಟನೆಯ ಹೊಣೆ ಹೊತ್ತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಮಂಡಲ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಇಜಾರಿ ಶಿರಸಪ್ಪ ವೃತ್ತದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ನಡೆದ ಐಪಿಎಲ್ ವಿಜಯೋತ್ಸವದಲ್ಲಿ, ಕಾಂಗ್ರೆಸ್ ಪಕ್ಷ ಯುವ ಜನತೆ ಆಕರ್ಷಿಸುವ ತರಾತುರಿಯಲ್ಲಿ ಮುಂಜಾಗ್ರತ ಕ್ರಮ ಕೈಗೊಂಡಿಲ್ಲ. ಅಗತ್ಯ ಭದ್ರತಾ ವ್ಯವಸ್ಥೆ ಮಾಡಿಕೊಳ್ಳದೇ ಅವಸರದಲ್ಲಿ ಸಂಭ್ರಮಾಚರಣೆ ಮಾಡಿದ್ದೆ ದುರ್ಘಟನೆಗೆ ಕಾರಣವಾಗಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಹಾಗೂ ಗೃಹ ಸಚಿವ ಪರಮೇಶ್ವರ ಘಟನೆಯ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಬೇಕು ಪ್ರತಿಭಟನಾಕಾರರು ಆಗ್ರಹಿಸಿದರು.

ಮಂಡಲ ಅಧ್ಯಕ್ಷ ಕೆ.ಲಕ್ಷ್ಮಣ್, ರಾಜ್ಯ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ಜಿ.ನಂಜನಗೌಡ್ರು, ಎಸ್ಸಿ ಮೋರ್ಚಾ ಕಾರ್ಯದರ್ಶಿ ಎಸ್.ಪಿ.ಲಿಂಬ್ಯನಾಯ್ಕ, ಜಿಲ್ಲಾ ಎಸ್ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿ ಕಣಿವಿಹಳ್ಳಿ ಮಂಜುನಾಥ ಮಾತನಾಡಿದರು. ರಾಜ್ಯ ಸಹಕಾರ ಸಮಿತಿ ಸದಸ್ಯ ಓಂಕಾರಗೌಡ, ಜಿಲ್ಲಾ ಕಾರ್ಯದರ್ಶಿ ಕುಸುಮಾ ಜಗದೀಶ್, ರೈತ ಮೋರ್ಚಾ ಕಾರ್ಯದರ್ಶಿ ಚನ್ನನಗೌಡ, ಎಸ್ಟಿ ಮೋರ್ಚಾ ಉಪಾಧ್ಯಕ್ಷ ಲಿಂಗಾನಂದ, ಮಂಡಲ ಉಪಾಧ್ಯಕ್ಷ ಮೈದೂರು ಮಲ್ಲಿಕಾರ್ಜುನ್, ಜವಳಿ ಮಹೇಶ, ಪ್ರಾಣೇ, ಬೂದಿ ನವೀನ್, ಶ್ರೀಪತಿ, ಮಂಜನಾಯ್ಕ, ಹುಣ್ಸಿಹಳ್ಳಿ ಪ್ರಕಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.