ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಮಹಿಳೆಯರ ಪರ: ಶ್ರೀರಾಮುಲು

Published 11 ಏಪ್ರಿಲ್ 2024, 16:12 IST
Last Updated 11 ಏಪ್ರಿಲ್ 2024, 16:12 IST
ಅಕ್ಷರ ಗಾತ್ರ

ಬಳ್ಳಾರಿ: ಮಹಿಳೆಯರ ಪರವಾಗಿ ಬಿಜೆಪಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು,  ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತಿದೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಹೇಳಿದರು.

ಬಸವಭವನದಲ್ಲಿ ಗುರುವಾರ ನಡೆದ ‘ಮಹಿಳಾ ಮಾತೃ’ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಿಜೆಪಿ ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಎಲ್ಲ ಸಮುದಾಯಗಳ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ. ಕಾಂಗ್ರೆಸ್‌ನಿಂದ ಈವರೆಗೆ ಮಹಿಳಾ ಪರವಾದ ಯಾವುದೇ ನಿರ್ದಿಷ್ಟ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಾಗಿಲ್ಲ’ ಎಂದರು.

‘ಚುನಾವಣೆ ಎಂಬ ಕುರುಕ್ಷೇತ್ರ ಯುದ್ಧದಲ್ಲಿ ನಾನಿದ್ದೇನೆ. ದೊಡ್ಡ ಶಕ್ತಿಯಾಗಿರುವ ಮಹಿಳೆಯರು ಈ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಲು ಶ್ರಮಿಸಬೇಕು. ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು’ ಎಂದು ಮನವಿ ಮಾಡಿದರು.

ಬಿಜೆಪಿ ನಾಯಕಿ ಅರುಣಾ ಲಕ್ಷ್ಮೀ ಮಾತನಾಡಿ, ‘ದೇಶದಲ್ಲಿ ಬಿಜೆಪಿ ಪರ ಅಲೆಯಿದೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಬೇಕು ಎಂಬುದು ದೇಶದ ಮತದಾರರ ಸಂಕಲ್ಪ. ಬಿ.ಶ್ರೀರಾಮುಲು ಅವರನ್ನು ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬ ಮಹಿಳೆಯರ ಮೇಲಿದೆ. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಮನೆಮನೆಗೆ ತೆರಳಿ, ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯರಾದ ಭಾರತಿಶೆಟ್ಟಿ, ಹೇಮಲತಾ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಸಹ ಸಂಚಾಲಕಿ ಭವ್ಯಾ ಅಂಬರೇಷ್, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ಮಹಿಳಾ
ಮೋರ್ಚಾ ಜಿಲ್ಲಾಧ್ಯಕ್ಷೆ ಸುಗುಣಾ, ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಸೇರಿದಂತೆ ಪಕ್ಷದ ಮುಖಂಡರು ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT