ಹೊಸಪೇಟೆ: ‘ಬರುವ ದಿನಗಳಲ್ಲಿ ಬಿಜೆಪಿಯ ಸಂಘಟನೆಯ ಇನ್ನಷ್ಟು ಬಲಪಡಿಸಬೇಕು’ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರಜೀ ಕಾರ್ಯಕರ್ತರಿಗೆ ತಿಳಿಸಿದರು.

ಗುರುವಾರ ಸಂಜೆ ನಗರದಲ್ಲಿ ಹಮ್ಮಿಕೊಂಡಿದ್ದ ಬಳ್ಳಾರಿ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.

‘ಒಗ್ಗಟ್ಟಿನಿಂದ ಕೆಲಸ ಮಾಡಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ. ಶೀಘ್ರವೇ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಾಗಲಿದೆ. ಜ. 13ರಂದು ಈ ಸಂಬಂಧ ಸಭೆ ನಡೆಯಲಿದೆ. ಅದರಲ್ಲಿ ಸಂಘಟನೆ ಕುರಿತು ಚರ್ಚಿಸಲಾಗುವುದು. ಎಲ್ಲರೂ ಸಭೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ತಿಳಿಸಿದರು.

ಅರಣ್ಯ ಸಚಿವ ಆನಂದ್ ಸಿಂಗ್ ಮಾತನಾಡಿ, ‘ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಪಕ್ಷದ ಬೆಂಬಲಿಗರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು. ತಳಮಟ್ಟದಲ್ಲಿ ಪಕ್ಷ ಬಲಪಡಿಸಬೇಕು’ ಎಂದು ಹೇಳಿದರು.

ಸಂಸದ ವೈ.ದೇವೇಂದ್ರಪ್ಪ, ಶಾಸಕ ಸೋಮಶೇಖರ್ ರೆಡ್ಡಿ, ಪಕ್ಷದ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಸಂದೀಪ್ ಕುಮಾರ್, ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಮುಖಂಡರಾದ ನೇಮರಾಜ ನಾಯ್ಕ, ಚಂದ್ರ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.