ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ: ಕಾರ್ಮಿಕ ಸಾವು

Published 14 ಜನವರಿ 2024, 21:57 IST
Last Updated 14 ಜನವರಿ 2024, 21:57 IST
ಅಕ್ಷರ ಗಾತ್ರ

ಬಳ್ಳಾರಿ: ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಗದರ ಗುಗ್ಗರಹಟ್ಟಿ ಪ್ರದೇಶದಲ್ಲಿ ನಡೆದಿದೆ.

ಸಲೀಂ ಮೃತ ದುರ್ದೈವಿ. ಘಟನೆಯಲ್ಲಿ ಐವರಿಗೆ ಗಾಯಗಳಾಗಿದೆ. ಈ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ವಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭರತ್ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದ್ದು, ಬಾಯ್ಲರ್ ಸ್ಫೋಟಗೊಳ್ಳಲು ಕಾರಣ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT