ಬಳ್ಳಾರಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಕಾರ್ಯ ಆರಂಭಗೊಂಡಿದ್ದು, ಅರ್ಹ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಮತದಾರರ ನೋಂದಣಿ ಅಧಿಕಾರಿಯೂ ಆದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಹೇಳಿದರು.

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಕುರಿತಂತೆ ಕಲಬುರಗಿ ವಿಭಾಗದ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ರಾಜಕೀಯ ಪಕ್ಷದ ಮುಖಂಡರೊಂದಿಗೆ ಶುಕ್ರವಾರ ವರ್ಚುವಲ್ ಸಭೆ ನಡೆಸಿ ಅವರು ಮಾತನಾಡಿದರು.

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಪದಾವಧಿಯು 2026ರ ನ. 11ರಂದು ಮುಕ್ತಾಯಗೊಳ್ಳಲಿದೆ. ಅರ್ಹತಾ ದಿನಾಂಕ ನ.1ಕ್ಕೆ ಅನ್ವಯಿಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧಪಡಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರೂ ನಮೂನೆ 19 ಮತ್ತು ಅನುಬಂಧ-2ರಲ್ಲಿ ಸೂಕ್ತ ಮಾಹಿತಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಈಗಾಗಲೇ ವಿತರಿಸಲಾಗಿದೆ ಎಂದರು.

ವೇಳಾಪಟ್ಟಿ: ನ.6ರಂದು ನಮೂನೆ 19ರಲ್ಲಿ ಅರ್ಜಿ ಸ್ವೀಕರಿಸುವ ಕೊನೆಯ ದಿನ. ನ.5– ಕರಡು ಮತದಾರರ ಪಟ್ಟಿ ಪ್ರಕಟಣೆ. ನ.25ರಿಂದ ನ.10ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನಿಗದಿ. ನ.30– ಅಂತಿಮ ಮತದಾರರ ಪಟ್ಟಿ ಪ್ರಕಟಣೆ.

ಸ್ವೀಪ್ ಚಟುವಟಿಕೆಗೆ ಸೂಚನೆ: ಅರ್ಹ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಬೇಕು. ಕ್ರಿಯಾತ್ಮಕವಾಗಿ ನೋಂದಣಿ ಮಾಡುವಲ್ಲಿ ಜಿಲ್ಲಾವಾರು, ತಾಲ್ಲೂಕುವಾರು ಸ್ವೀಪ್ ಸಮಿತಿ ರಚಿಸಲಾಗಿದ್ದು, ಸ್ವೀಪ್ ಚಟುವಟಿಕೆ ಹೆಚ್ಚಾಗಿ ಆಯೋಜಿಸಬೇಕು ಎಂದು ನಿರ್ದೇಶನ ನೀಡಿದರು.

ಹೆಸರು ನೋಂದಾಯಿಸಲು ಅರ್ಹತೆ: 2025ರ ನ.1ಕ್ಕೆ ಮೊದಲ 6 ವರ್ಷಗಳ ಅವಧಿಯಲ್ಲಿ ಸೆಕೆಂಡರಿ ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ನಿಗದಿತ ರಾಜ್ಯದೊಳಗಿನ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹರು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.