ಹೂವಿನಹಡಗಲಿ : ತಾಲ್ಲೂಕಿನ ಐತಿಹಾಸಿಕ ಸುಪ್ರಸಿದ್ಧ ಮೈಲಾರ ಕ್ಷೇತ್ರದಲ್ಲಿ ಮೈಲಾರಲಿಂಗೇಶ್ವರ ಹಾಗೂ ಗಂಗಿಮಾಳಮ್ಮ ದೇವಿಯರ ಕಲ್ಯಾಣ ಮಹೋತ್ಸವದ ಅಂಗವಾಗಿ ಸೋಮವಾರ ರಾತ್ರಿ ರಥೋತ್ಸವ ಜರುಗಿತು.

ವಂಶಪಾರಂಪರ್ಯ ಧರ್ಮಕರ್ತ ಗುರು ವೆಂಕಪ್ಪಯ್ಯ ಒಡೆಯರ್ ನೇತೃತ್ವದಲ್ಲಿ ಅರ್ಚಕ ಪ್ರಮೋದ ಭಟ್ ಹಾಗೂ ಬಾಬುದಾರರು ಕಲ್ಯಾಣೋತ್ಸವದ ಸಾಂಪ್ರದಾಯಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಸ್ವಾಮಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಕಂಕಣ ವಿತರಿಸಲಾಯಿತು. ಅವಿವಾಹಿತರು ಸ್ವಾಮಿಯಲ್ಲಿ ಪ್ರಾರ್ಥಿಸಿ ಕಂಕಣ ಧರಿಸಿದರೆ ವಿವಾಹ ಭಾಗ್ಯ ಕೂಡಿ ಬರಲಿದೆ ಎಂಬ ನಂಬಿಕೆ ಇದೆ. ಕಲ್ಯಾಣೋತ್ಸವದಲ್ಲಿ ನಾಡಿನ ವಿವಿಧ ಭಾಗಗಳ ಭಕ್ತರು ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು. ರಾತ್ರಿ 9.15ಕ್ಕೆ ಮೈಲಾರಲಿಂಗೇಶ್ವರ ರಥೋತ್ಸವ ಸಂಭ್ರಮದಿಂದ ಜರುಗಿತು.

ನವ ವಿವಾಹತ ಜೋಡಿಗಳು ಕ್ಷೇತ್ರಕ್ಕೆ ಬಂದು ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನ ಸಮಿತಿಯ ಸಿಬ್ಬಂದಿ, ಬಾಬುದಾರರು, ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.