ಬಳ್ಳಾರಿ: ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳಗಲ್ಲು ಗ್ರಾಮದಲ್ಲಿ ಇತ್ತೀಚೆಗೆ ದಲಿತ ಸಮುದಾಯದ ನಾಲ್ವರಿಗೆ ಜಾತಿ ನಿಂದನೆ ಹಾಗೂ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಾರ್ಚ್ 1ರಂದು ರಾತ್ರಿ 8 ಗಂಟೆ ಸುಮಾರಿನಲ್ಲಿ ಗ್ರಾಮದ ಮದ್ಯದಂಗಡಿ ಎದುರು ಈ ಘಟನೆ ನಡೆದಿದೆ.

ದೂರುದಾರ ಸೂರ್ಯನಾರಾಯಣ ಹಾಗೂ ಅವರ ಜೊತೆಗಿದ್ದ ಗಾಳೆಪ್ಪ, ಎರ್ರಿಸ್ವಾಮಿ ಮತ್ತು ಮಲ್ಲಪ್ಪ ಎಂಬುವವರು ಮದ್ಯದಂಗಡಿ ಬಳಿ ಇದ್ದಾಗ, ಗ್ರಾಮದ ಎರ್ರಿಸ್ವಾಮಿ, ರಾಜು ಹಾಗೂ ಗಂಗಾಧರ ಎಂಬವರು ಜಾತಿ ನಿಂದನೆ ಪದಗಳನ್ನು ಬಳಸಿ, ಸಾರ್ವಜನಿಕವಾಗಿ ಅಪಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜತೆಗೆ, ಗ್ರಾಮದಿಂದ ಬಹಿಷ್ಕಾರ ಹಾಕುವುದಾಗಿಯೂ, ದೇವಸ್ಥಾನಗಳನ್ನು ಪ್ರವೇಶಿಸದಂತೆಯೂ ಬೆದರಿಸಿದ್ದಾರೆ ಎಂದು ದೂರಲಾಗಿದೆ.

ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಗುರುವಾರ ಕೊಳಗಲ್ಗೆ ಭೇಟಿ ನೀಡಿದ್ದು, ಗ್ರಾಮದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.