ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

40 ಬಿಡಾಡಿ ದನಗಳು ಗೋಶಾಲೆಗೆ

Last Updated 11 ಜುಲೈ 2018, 11:21 IST
ಅಕ್ಷರ ಗಾತ್ರ

ಹೊಸಪೇಟೆ: ತಾಲ್ಲೂಕಿನ ಕಮಲಾಪುರದಲ್ಲಿ ಬುಧವಾರ ಪಟ್ಟಣ ಪಂಚಾಯಿತಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, 40 ಬಿಡಾಡಿ ದನಗಳನ್ನು ಗೋ ಶಾಲೆಗೆ ಕಳುಹಿಸಿದ್ದಾರೆ.

‘ರಸ್ತೆ ಮೇಲೆ ಬಿಡಾಡಿ ದನಗಳು ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ವಯಸ್ಸಾದ ಹಿರಿಯ ನಾಗರಿಕರು, ಮಕ್ಕಳಿಗೆ ಓಡಾಡಲು ತೊಂದರೆಯಾಗುತ್ತಿದೆ. ಇದರಿಂದಾಗಿ ಬಿಡಾಡಿ ದನಗಳನ್ನು ವಶಕ್ಕೆ ಪಡೆದು ತಾಲ್ಲೂಕಿನ ಮಲಪನಗುಡಿ ಗೋಶಾಲೆಗೆ ಸಾಗಿಸಿದ್ದೇವೆ’ ಎಂದು ಕಮಲಾಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಫಣಿರಾಜ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಬಿಡಾಡಿ ದನಗಳಿಂದ ಆಗುತ್ತಿರುವ ತೊಂದರೆ ಕುರಿತು ಸಾಕಷ್ಟು ದೂರುಗಳು ಬಂದಿದ್ದವು. ಉಪವಿಭಾಗಾಧಿಕಾರಿ ಗಾರ್ಗಿ ಜೈನ್‌ ಅವರ ಸೂಚನೆಯ ಮೇರೆಗೆ ದನಗಳನ್ನು ವಶಕ್ಕೆ ಪಡೆಯುತ್ತಿದ್ದೇವೆ. ಈ ಕುರಿತು ದನಗಳ ಮಾಲೀಕರಿಗೆ ಅನೇಕ ಸಲ ಎಚ್ಚರಿಕೆ ಕೊಟ್ಟಿರು ಪ್ರಯೋಜನವಾಗಿಲ್ಲ. ಅನಿವಾರ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT