ಬಳ್ಳಾರಿ: ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 2026-27ನೇ ಶೈಕ್ಷಣಿಕ ಸಾಲಿನ ನಾನಾ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಮೂಲಕ ಈ ಪ್ರವೇಶಾತಿ ನಡೆಯಲಿದೆ ಎಂದು ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸೋಫಿಯಾ ಪರ್ವೀನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಡಿ.14 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು 2026ರ ಜ.14ರವರೆಗೆ ಅರ್ಜಿ ಸಲ್ಲಿಸಬಹುದು. ಸ್ನಾತಕ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಥವಾ ಈಗಾಗಲೇ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಹರಾಗಿದ್ದಾರೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯವು ಎಂ.ಎ (ಕನ್ನಡ, ಇಂಗ್ಲಿಷ್, ಹಿಂದಿ, ಅರ್ಥಶಾಸ್ತ್ರ, ಇತಿಹಾಸ), ಎಂ.ಎಸ್ಸಿ (ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ), ಎಂ.ಕಾಂ, ಎಂ.ಬಿ.ಎ, ಎಂ.ಟೆಕ್, ಬಿ.ಎಡ್ ಹಾಗೂ ಪತ್ರಿಕೋದ್ಯಮ ಸೇರಿದಂತೆ ನಾನಾ ವಿಷಯಗಳಲ್ಲಿ ಪ್ರವೇಶಾವಕಾಶ ಕಲ್ಪಿಸಿದೆ. ಈ ಬಾರಿ ಹೊಸದಾಗಿ ಕೆಲವು ಕೋರ್ಸ್ಗಳನ್ನು ಆರಂಭಿಸಲಾಗಿದ್ದು, ಒಟ್ಟು 157 ವಿಷಯಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಕಲಬುರಗಿ, ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆಯು ಕಂಪ್ಯೂಟರ ಆಧಾರಿತ ಮಾದರಿಯಲ್ಲಿ ನಡೆಯಲಿದ್ದು, ಭಾಷಾ ವಿಷಯಗಳನ್ನು ಹೊರತುಪಡಿಸಿ ಉಳಿದ ಪ್ರಶ್ನೆ ಪತ್ರಿಕೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರಲಿವೆ.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು https://exams.nta.nic.in/cuet-pg/ ಅಥವಾ www.cuk.ac.inಗೆ ಭೇಟಿ ನೀಡಬಹುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.