ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ | ಜಿಲ್ಲಾ ಆಸ್ಪತ್ರೆಯಲ್ಲಿ ಮಗು ಹೆತ್ತ ಸಿಇಒ

Last Updated 17 ಮಾರ್ಚ್ 2022, 22:02 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿದ್ದ ಐಎಎಸ್‌ ಅಧಿಕಾರಿ ಕೆ.ಆರ್‌.ನಂದಿನಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಹೆಣ್ಣುಮಗುವಿಗೆ ಜನ್ಮ ನೀಡಿದರು.

ನಂದಿನಿ ಅವರಿಗೆ ಸಹಜ ಹೆರಿಗೆ ಆಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಪ್ರಸೂತಿ ತಜ್ಞ ಡಾ. ವೀರೇಂದ್ರ ಕುಮಾರ್‌ ನೇತೃತ್ವದ ಹಿರಿಯ ಮತ್ತು ಕಿರಿಯ ವೈದ್ಯರ ದೊಡ್ಡ ತಂಡವೇ ಐಎಎಸ್‌ ಅಧಿಕಾರಿಯ ಆರೈಕೆ ಮಾಡಿದೆ.

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡ ಮೊದಲ ಐಎಎಸ್‌ ಅಧಿಕಾರಿ ನಂದಿನಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT