ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮೆ ಯೋಜನೆಗಳಡಿ ನೋಂದಣಿಗೆ ಸಿಇಒ ಮನವಿ

Published 3 ನವೆಂಬರ್ 2023, 15:49 IST
Last Updated 3 ನವೆಂಬರ್ 2023, 15:49 IST
ಅಕ್ಷರ ಗಾತ್ರ

ಬಳ್ಳಾರಿ: ‘ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳಡಿ ನಾಗರಿಕರು ನೋಂದಾಯಿಸಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಮನವಿ ಮಾಡಿದ್ದಾರೆ.

ಪ್ರತಿಯೊಂದು ಬ್ಯಾಂಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಎಂಜೆಜೆಬಿವೈ , ಪಿಎಂಎಸ್‍ಬಿವೈ ವಿಮಾ ಯೋಜನೆಗಳಡಿ ನೋಂದಾಯಿಸಿಕೊಳ್ಳಲು ಅಕ್ಟೋಬರ್‌ನಿಂದ ಡಿಸೆಂಬರ್ 31 ರವರೆಗೆ ಮೇಳ ನಡೆಯುತ್ತಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 18 ರಿಂದ 70 ವಯಸ್ಸಿನ ವರೆಗಿನ ನಾಗರಿಕರು ₹ 20 ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯಡಿ 18 ರಿಂದ 50 ವಯಸ್ಸಿನವರೆಗಿನ ನಾಗರಿಕರು  ₹ 436 ಗಳ ಪ್ರೀಮಿಯಂ ಹಣವನ್ನು ವಾರ್ಷಿಕವಾಗಿ ಪಾವತಿಸಿದರೆ, ಪ್ರತಿ ಯೋಜನೆಯಡಿ ₹ 2 ಲಕ್ಷದವರೆಗೆ ವಿಮೆ ಸೌಲಭ್ಯ ದೊರಕುತ್ತದೆ ಎಂದಿದ್ದಾರೆ.

ಈ ಅಭಿಯಾನದಡಿ ಗ್ರಾಮ ಪಂಚಾಯಿತಿಯ ಪ್ರತಿಯೊಬ್ಬ ಅರ್ಹ ನಾಗರಿಕರು ಎರಡು ಯೋಜನೆಗಳಲ್ಲಿ ನೋಂದಣಿ ಮಾಡುವ ಉದ್ದೇಶದಿಂದ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕ್ ಶಾಖೆ ಅಧಿಕಾರಿಗಳಿಗೆ ತಿಂಗಳಿಗೊಮ್ಮೆ ಪಿಎಂಜೆಜೆಬಿವೈ, ಪಿಎಂಎಸ್‍ಬಿವೈ ಹಾಗೂ ಕೆಸಿಸಿ ಬೆಳೆಸಾಲ ಮೇಳ ಹಮ್ಮಿಕೊಳ್ಳಲು ಲೀಡ್ ಬ್ಯಾಂಕ್‍ನಿಂದ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಗ್ರಾಮ ಪಂಚಾಯತಿ ಮಟ್ಟದ ಸ್ವ-ಸಹಾಯ ಸಂಘಗಳ ಒಕ್ಕೂಟದ ಸದಸ್ಯರು, ಕೃಷಿ ಸಖಿ, ಪಶು ಸಖಿ ಹಾಗು ಎಂಬಿಕೆ, ಕಂದಾಯ ಇಲಾಖೆ, ಕೃಷಿ, ತೋಟಗಾರಿಕೆ, ಪಶು ಸಂಗೋಪನಾ ಇಲಾಖೆಗಳ ಸಹಯೋಗದಲ್ಲಿ ಬ್ಯಾಂಕಿನ ಅಧಿಕಾರಿಗಳ ಜೊತೆಗೂಡಿ ವಿಮೆ ಸೌಲಭ್ಯಕ್ಕೆ ನೋಂದಾಯಿಸಿಕೊಳ್ಳಲು ಜಾಗೃತಿ ನೀಡಬೇಕು ಹಾಗೂ ಪ್ರತಿಯೊಬ್ಬರೂ ಮೇಳಗಳಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಪಂ ಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT