ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ನರೇಗಾ ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ, ಪರಿಶೀಲನೆ 

Published 16 ಮೇ 2024, 15:52 IST
Last Updated 16 ಮೇ 2024, 15:52 IST
ಅಕ್ಷರ ಗಾತ್ರ

ಬಳ್ಳಾರಿ: ತಾಲ್ಲೂಕಿನ ವಿವಿಧ ಗ್ರಾಮಗಳ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಿದ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಗುರುವಾರ ವೀಕ್ಷಣೆ ಮಾಡಿದರು.

ಬಳ್ಳಾರಿ ತಾಲ್ಲೂಕಿನ ಬೈರದೇವನಹಳ್ಳಿ ಗ್ರಾಮದಲ್ಲಿ ಕೈಗೊಂಡಿರುವ ಸಿ.ಸಿ ಚರಂಡಿ ಕಾಮಗಾರಿ ವೀಕ್ಷಣೆ ಮಾಡಿ, ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ನಿರ್ದೇಶನ ನೀಡಿದರು.

ಬಳಿಕ ಶಿವಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯ ನರ್ಸರಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಮೋಕಾದಲ್ಲಿ ಕೃಷಿ ಹೊಂಡ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.

ಕಾರೇಕಲ್ಲು ಗ್ರಾಮದಲ್ಲಿ ಕೃಷಿ ಇಲಾಖೆಯ ಬದು ಮತ್ತು ಕೃಷಿ ಹೊಂಡ ನಿರ್ಮಾಣ ಕಾಮಗಾರಿ, ಶಿಡಿಗಿನಮೊಳ ಮತ್ತು ಮೀನಹಳ್ಳಿ ಗ್ರಾಮದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ, ಪರಮದೇವನಹಳ್ಳಿ ಗ್ರಾಮದಲ್ಲಿ ಸ್ಮಶಾನ ಕಾಮಗಾರಿ ಪರಿಶೀಲಿಸಿದರು.

ಬಳ್ಳಾರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ಬಸವರಾಜ, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT