ಬಳ್ಳಾರಿ: ಗಾಂಧಿನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಿದ್ದರಾಮೇಶ್ವರ ಗಡೇದ್ ಅವರಿಗೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ.
2007ರ ಬ್ಯಾಚ್‌ನ ಅಧಿಕಾರಿ ಸಿದ್ದರಾಮೇಶ್ವರ್, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬಾಗಲಕೋಟ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
2022ರ ಜುಲೈ 22 ರಿಂದ ಗಾಂಧಿನಗರ ಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು, 2023ರಲ್ಲಿ ಪ್ರಮುಖ ಕೊಲೆ ಪ್ರಕರಣವೊಂದನ್ನು ಭೇದಿಸಿದ್ದರು. ಇದರ ಜತೆಗೆ, 8 ಕಳ್ಳತನ ಪ್ರಕರಣಗಳಲ್ಲಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದರು.