ಕಂಪ್ಲಿ (ಬಳ್ಳಾರಿ ಜಿಲ್ಲೆ) : ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಭಾನುವಾರ ತಡೆದಿದೆ.

58 ವರ್ಷದ ವ್ಯಕ್ತಿಯೊಂದಿಗೆ ಹಸೆಮಣೆ ಏರಬೇಕಿದ್ದ ಅಪ್ರಾಪ್ತೆಯನ್ನು ಅಧಿಕಾರಿಗಳು ರಕ್ಷಿಸಿ ಬಾಲ್ಯವಿವಾಹ ಕಾಯ್ದೆಯಡಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ಪ್ರಾಥಮಿಕ ಮಾಹಿತಿ ಪ್ರಕಾರ ವರನಿಗೆ ಇದು ಮೂರನೇ ವಿವಾಹ’ ಎಂದು ತಿಳಿದು ಬಂದಿರುವುದಾಗಿ ತಹಶೀಲ್ದಾರ್ ಗೌಸಿಯಾಬೇಗಂ ಮಾಹಿತಿ ನೀಡಿದರು.

‘ವರ, ಅಪ್ರಾಪ್ತೆಯ ತಂದೆ–ತಾಯಿ, ಮಧ್ಯಸ್ಥಿಕೆ ವಹಿಸಿದ್ದ ಮಹಿಳೆಯ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಪಿಎಸ್‍ಐ ವಿರುಪಾಕ್ಷಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.