‘ಮಸಣ ಕಾರ್ಮಿಕರನ್ನು ಗುರುತಿಸಿ ಅವರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರವರ್ಗದಡಿ ಮೀಸಲಾತಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇವೆ. ಇದೇ ಮೀಸಲಾತಿ ಉನ್ನತ ಶಿಕ್ಷಣ ಹಾಗೂ ಆರ್ಥಿಕ ಸೌಲಭ್ಯಗಳಿಗೂ ಮುಂದುವರಿಸಬೇಕು. ಮಸಣ ಕಾರ್ಮಿಕರ ಗಣತಿ ನಡೆಸಿ ಪುನರ್ವಸತಿಗೆ ಕ್ರಮವಹಿಸಬೇಕು. ಕುಣಿತ ಅಗೆಯುವ ಮತ್ತು ಮುಚ್ಚುವ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಕನಿಷ್ಠ ₹4,000 ಕೂಲಿ ಪಾವತಿಸುವಂತೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ.