ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತರ ಅಭಿವೃದ್ಧಿಗೆ ಕಾಂಗ್ರೆಸ್ ಮುಂದಾಗಿಲ್ಲ ಶಾಸಕ ಸೋಮಶೇಖರ್ ರೆಡ್ಡಿ

Last Updated 20 ಮಾರ್ಚ್ 2023, 9:15 IST
ಅಕ್ಷರ ಗಾತ್ರ

ಬಳ್ಳಾರಿ : ಕಾಂಗ್ರೆಸ್ಸಿನವರು ದಲಿತರನ್ನು ಕೇವಲ ವೋಟ್ ಬ್ಯಾಂಕಿಗಾಗಿ ಬಳಸಿಕೊಂಡಿದೆ ವಿನಃ ಅವರ ಅಭಿವೃದ್ಧಿಗೆ ಮುಂದಾಗಿಲ್ಲ ಎಂದು ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ನಲ್ಲೇಚೆರವು ಪ್ರದೇಶದಲ್ಲಿರುವ ವಾಲ್ಮೀಕಿ ಭವನದಲ್ಲಿ ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಭಾಗವಹಿಸಿ ಸೋಮವಾರ ಅವರು ಮಾತನಾಡಿದರು.ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣ ಭರವಸೆ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದತ್ತು.

ಡಾ.ಬಿ.ಆರ್ ಅಂಬೇಡ್ಕರ್ ನಿಧನ ಹೊಂದಿದ ಸಂದರ್ಭದಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಶವ ಸಂಸ್ಕಾರ ಮಾಡಲು ಮೂರು ಅಡಿ ಜಾಗ ನೀಡಲಿಲ್ಲ. ಆದೇ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ನಿಧನ ಹೊಂದಿದಾಗ ನೂರಾರು ಎಕರೆ ಜಾಗ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಬಳ್ಳಾರಿ ನಗರ ಶಾಸಕ ಆದ ನಂತರ ಎಸ್ಸಿ, ಎಸ್ಟಿ ಜನಾಂಗದವರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಸತಿ ಸಚಿವ ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಪ್ರಯತ್ನದ ಫಲವಾಗಿ ಇಂದು ಬಡವರಿಗೆ ಹಕ್ಕುಪತ್ರ ನೀಡಿದ್ದೇನೆ. ಬಳ್ಳಾರಿ ನಗರದಲ್ಲಿ 12 ಸಾವಿರ ಮನೆಗಳ ಹಕ್ಕುಪತ್ರ ನೀಡಿದ್ದೇನೆ. ಕಾಂಗ್ರೆಸ್'ನವರು ಕೇವಲ ತಮ್ಮ ಭಾವಚಿತ್ರವಿರುವ ಪತ್ರ ನೀಡಿ ಕೈತೊಳಿದುಕೊಂಡಿದ್ದರು ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಪರಿಶಿಷ್ಟ ವರ್ಗಗಳಿಗೆ ಅನೇಕ ಯೋಜನೆಗಳು ಜಾರಿ ಮಾಡಿದೆ. ಸ್ಟಾರ್ಟ್ ಆಫ್ ಮೂಲಕ ಉದ್ಯೋಗ ಸೃಷ್ಟಿ ಮಾಡುತ್ತಿದೆ. ಪರಿಶಿಷ್ಟರಿಗಾಗಿ ವಿಶೇಷ ಸಹಾಯಧನ ನೀಡಿ ದಲಿತರ ಕಲ್ಯಾಣಕ್ಕೆ ಮುಂದಾಗಿದೆ.

ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣಕ್ಕಾಗಿ ಬಿಜೆಪಿ ಶ್ರಮಿಸಲಿದೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ಆರ್ಶೀವಾದ ಮಾಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT