ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಗ್ಯಾರೆಂಟಿ’ ಪ್ರದರ್ಶನಕ್ಕೆ ಎಡಿಸಿ ಚಾಲನೆ

Published 8 ಮಾರ್ಚ್ 2024, 16:30 IST
Last Updated 8 ಮಾರ್ಚ್ 2024, 16:30 IST
ಅಕ್ಷರ ಗಾತ್ರ

ಬಳ್ಳಾರಿ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು, ಇತರೆ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮೂರು ದಿನಗಳ (ಮಾ.08 ರಿಂದ 10 ರವರೆಗೆ) ವಸ್ತು ಪ್ರದರ್ಶನ ಮಳಿಗೆ ಏರ್ಪಡಿಸಲಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಶಕ್ತಿಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಯೋಜನೆಗಳ ಮಾಹಿತಿಯನ್ನು ವಸ್ತು ಪ್ರದರ್ಶನವು ಒಳಗೊಂಡಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರವು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಮತ್ತು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ವಸ್ತು ಪ್ರದರ್ಶನ ಮಳಿಗೆಯನ್ನು ಹಾಕಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾಹಿತಿ ಪಡೆಯಬಹುದಾಗಿದೆ ಎಂದರು.

ಪ್ರದರ್ಶನ ಮಳಿಗೆಯಲ್ಲಿ ಗ್ಯಾರಂಟಿ ಯೋಜನೆಗಳು, ವಿವಿಧ ಕಾರ್ಯಕ್ರಮಗಳ ಕುರಿತು ಬೆಳಕು ವ್ಯವಸ್ಥೆಯ ಮಾಹಿತಿ ಫಲಕಗಳನ್ನು ಅಳವಡಿಲಾಗಿದ್ದು, ವೀಕ್ಷಿಸುವ ಸಾರ್ವಜನಿಕರಿಗೆ ಮಳಿಗೆಯ ಪಕ್ಕದಲ್ಲಿ ‘ನುಡಿದಂತೆ ನಡೆದಿದ್ದೇವೆ’ ಸೆಲ್ಫಿ ಪಾಯಿಂಟ್ ಹಾಕಲಾಗಿದೆ.

ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯಿಂದ ಪ್ರತಿ ಮಾಹೆಯಾನ ಹೊರತರುವ ಜನಪದ ಪುಸ್ತಕಗಳನ್ನು ವಿತರಿಸಲಾಯಿತು. ಸಾರ್ವಜನಿಕರು ವಸ್ತು ಮಳಿಗೆಯನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ, ಇಲಾಖೆಯ ಸಿಬ್ಬಂದಿ ವಿಜಯ್ ಕುಮಾರ್, ಹನುಮಂತಪ್ಪ, ಮಲ್ಲೇಶಪ್ಪ, ಶ್ರೀಧರ ಕವಾಲಿ, ಹನುಮೇಶ್, ತಿಪ್ಪೇಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT