ಸಿರುಗುಪ್ಪ: ‘ಗ್ರಾಮೀಣ ಭಾಗದ ರೈತರ ಆರ್ಥಿಕತೆಯನ್ನು ಸಹಕಾರ ಸಂಸ್ಥೆಗಳು ಬಲಪಡಿಸಿ ಸಾವಿರಾರು ರೈತ ಕುಟುಂಬಗಳ ಸ್ವಾವಲಂಬನೆ ಬದುಕಿಗೆ ಪೂರಕವಾಗಿವೆ’ ಎಂದು ಶಾಸಕ ಬಿ.ಎಂ.ನಾಗರಾಜ ಹೇಳಿದರು.

ನಗರದ ಬಿಡಿಸಿಸಿ ಬ್ಯಾಂಕಿನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಸಹಕಾರ ಇಲಾಖೆ ಹಾಗೂ ಬಿ.ಎಂ.ಸುಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಮಂಗಳವಾರ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದರು.

ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಚೊಕ್ಕಬಸವನಗೌಡ ಮಾತನಾಡಿ, ‘ದೇಶದ ಅಭಿವೃದ್ದಿಯಲ್ಲಿ ರೈತರ ಹಾಗೂ ಸಹಕಾರ ಸಂಘಗಳ ಪಾತ್ರ ಮುಖ್ಯವಾಗಿದೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಸದುದ್ದೇಶ ಸಹಕಾರಗಳ ಗುರಿಯಾಗಿದೆ’ ಎಂದರು.

ಮಾಜಿ ಶಾಸಕ ಟಿ.ಎಂ.ಚಂದ್ರಶೇಖರಯ್ಯ ಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಚಂದ್ರರೆಡ್ಡಿ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಚೊಕ್ಕ ಪಲಾಕ್ಷ ಗೌಡ, ಬಳ್ಳಾರಿ ಸಹಕಾರ ಸಂಘಗಳ ಉಪ ನಿಬಂಧಕ ಜೆ.ಎಂ.ವೀರಭದ್ರಯ್ಯ ಸ್ವಾಮಿ ಸೇರಿದಂತೆ ತಾಲ್ಲೂಕಿನ ಎಲ್ಲಾ ಸಹಕಾರ ಬ್ಯಾಂಕ್ಗಳ ನಿರ್ದೇಶಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.