ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಪಲ್ಟಿ, ಇಬ್ಬರ ಸಾವು, ಇಬ್ಬರಿಗೆ ಗಾಯ

Published 21 ಮಾರ್ಚ್ 2024, 4:13 IST
Last Updated 21 ಮಾರ್ಚ್ 2024, 4:13 IST
ಅಕ್ಷರ ಗಾತ್ರ

ಕೂಡ್ಲಿಗಿ: ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಇಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ತಾಲ್ಲೂಕಿನ ಮೊರಬ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ರಾಜು (36) ಹಾಗೂ ಕರಣ್ (17) ಎಂದು ಗುರುತಿಸಲಾಗಿದ್ದು, ಅಭಿಷೇಕ್ ಮತ್ತು ಅಪ್ಪು ಗಾಯಗೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆ ಅಮೀನಗಡ ಪಟ್ಟಣದ ಈ ನಾಲ್ವರು ತಮ್ಮ ಗ್ರಾಮಕ್ಕೆ ಹೋಗಲು ಬೆಂಗಳೂರಿನಿಂದ ಬರುತ್ತಿದ್ದಾಗ ತಾಲ್ಲೂಕಿನ ಮೊರಬ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಚಾಲನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಹೊಲದಲ್ಲಿ ಹೋಗಿ ಪಲ್ಟಿಯಾಗಿ ಬಿದ್ದಿದೆ.

ಕರಣ್ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ರಾಜು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡ ಅಭಿಷೇಕ್ ಹಾಗೂ ಅಪ್ಪು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡ್ಲಿಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT