ಬಳ್ಳಾರಿ: ಕೃಷಿ ಇಲಾಖೆಯಿಂದ 2024-25ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಬಳ್ಳಾರಿ ಜಿಲ್ಲೆಯ 5,401 ರೈತರ ಖಾತೆಗಳಿಗೆ ಒಟ್ಟು ₹9.12 ಕೋಟಿ ಮೊತ್ತದ ಬೆಳೆ ವಿಮೆ ಪಾವತಿಯಾಗಿದೆ.

ಪ್ರಸ್ತಕ ಸಾಲಿನಲ್ಲಿಯೂ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಮನವಿ ಮಾಡಿದ್ದಾರೆ.

ತಾಲ್ಲೂಕುವಾರು ಮಾಹಿತಿ: ಬಳ್ಳಾರಿ ತಾಲ್ಲೂಕಿನ 1,077 ರೈತರಿಗೆ ₹2.52 ಕೋಟಿ, ಕುರುಗೋಡು ತಾಲ್ಲೂಕಿನ 404 ರೈತರಿಗೆ ₹62 ಲಕ್ಷ, ಕಂಪ್ಲಿ ತಾಲ್ಲೂಕಿನ 1,854 ರೈತರಿಗೆ ₹3.58 ಕೋಟಿ, ಸಂಡೂರಿನ 689 ರೈತರಿಗೆ ₹16 ಲಕ್ಷ, ಸಿರುಗುಪ್ಪ ತಾಲೂಕಿನ 1,377 ರೈತರಿಗೆ ₹2.24 ಕೋಟಿ ಪಾವತಿಯಾಗಿದೆ.

ಹೊಸ ಬೆಳೆವಿಮೆಗೆ ಕೊನೆ ದಿನ: ಸೂರ್ಯಕಾಂತಿ, ತೊಗರಿ, ಹತ್ತಿ, ಈರುಳ್ಳಿ, ಕೆಂಪು ಮೆಣಿಸಿನಕಾಯಿ, ಜೋಳ ಹಾಗೂ ಮೆಕ್ಕೆಜೋಳ ಬೆಳೆಗಳಿಗೆ ಜುಲೈ 31 ಹಾಗೂ ಇನ್ನಿತರೆ ಬೆಳೆಗಳಾದ ನವಣೆ, ಶೇಂಗಾ, ಭತ್ತ, ರಾಗಿ, ಹುರಳಿ ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ.

ಜಿಲ್ಲೆಯ ಎಲ್ಲಾ ರೈತರು ಬೆಳೆ ವಿಮೆ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ ಹಾಗೂ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.