ಬಳ್ಳಾರಿ: 'ವೀರಶೈವ ವಿದ್ಯಾವರ್ಧಕ ಸಂಘದ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕಾಗಿ ಫೆ.4, 5, 6 ರಂದು ಮೂರು ದಿನಗಳ ಕಾಲ ಸಾಂಸ್ಕೃತಿಕ ಉತ್ಸವ -2020 ಹಮ್ಮಿಕೊಳ್ಳಲಾಗಿದೆ' ಎಂದು ಸಂಘದ ಅಧ್ಯಕ್ಷ ಉಡೇದ ಬಸವರಾಜ ಮತ್ತು ಕಾರ್ಯದರ್ಶಿ ಚೋರನೂರು ಟಿ.ಕೊಟ್ರಪ್ಪ ತಿಳಿಸಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಫೆ. 4ರಂದು ಬೆಳಿಗ್ಗೆ 9ಕ್ಕೆ ಇಲ್ಲಿನ ಮುನ್ಸಿಪಲ್ ಕಾಲೇಜು ಮೈದಾನದಿಂದ ನಡೆಯಲಿರುವ ಮೆರವಣಿಗೆಯಲ್ಲಿ ಕಲಾ ತಂಡಗಳೊಂದಿಗೆ ವಿದ್ಯಾರ್ಥಿಗಳು ಸೇರಿ 3 ಸಾವಿರ ಮಂದಿ ಭಾಗವಹಿಸುವರು. ನಗರ ಉಪವಿಭಾಗದ ಡಿವೈಎಸ್ಪಿ ಕೆ.ರಾಮರಾವ್ ಚಾಲನೆ ನೀಡುವರು’ ಎಂದು ತಿಳಿಸಿದರು.

‘ಉತ್ಸವಕ್ಕೆ ಫೆ. 5ರಂದು ಸಂಜೆ 6ಕ್ಕೆ ಇಲ್ಲಿನ ಶೆಟ್ರಗುರುಶಾಂತಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಉದ್ಘಾಟಿಸಲಿದ್ದು, ಎಮ್ಮಿಗನೂರು ಹಂಪಿಸಾವಿರ ದೇವರ ಮಠದ ವಾಮದೇವ ಶಿವಾಚಾರ್ಯ ಸ್ವಾಮಿ ಸಾನಿಧ್ಯ ವಹಿಸುವರು’ ಎಂದರು.

‘6ರಂದು ಸಂಜೆ 6ಕ್ಕೆ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿದ್ದು ಪಿ.ಅಲಗೂರು ಸಮಾರೋಪ ಭಾಷಣ ಮಾಡುವರು. ಉತ್ಸವದ ಅಂಗವಾಗಿ ಕರಕುಶ ಕಲಾ ಸ್ಪರ್ಧೆ, ಸ್ವರಚಿತ ಕವನವಾಚನ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ’ ಎಂದು ತಿಳಿಸಿದರು.

‘ಎರಡು ದಿನಗಳ ಕಾಲ 40 ಕಲಾ ತಂಡಗಳ 300 ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ’ ಎಂದರು.

ಸಂಘದ ಉಪಾಧ್ಯಕ್ಷ ವೀರಭದ್ರಶರ್ಮ, ಕೋಳೂರು ಮಲ್ಲಿಕಾರ್ಜುನಗೌಡ, ರಾಮುಗೌಡ, ವೀರುಪಾಕ್ಷ, ಶರಣನಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.