ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಎರಡು ಮನೆಗಳಿಗೆ ಹಾನಿ, ನಾರಿಹಳ್ಳಕ್ಕೆ ನೀರು

Published 21 ಮೇ 2024, 14:26 IST
Last Updated 21 ಮೇ 2024, 14:26 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಉತ್ತಮ ಮಳೆ ಸುರಿದಿದ್ದು ಎರಡು ಮನೆಗಳಿಗೆ ಹಾನಿಯಾಗಿದೆ. ಮತ್ತೊಂದೆಡೆ, ಜಲಮೂಲಗಳಿಗೆ ನೀರು ಹರಿದು ಬರುತ್ತಿದೆ. 

ಸಂಡೂರು ತಾಲ್ಲೂಕಿನ ಭುಜಂಗನಗರ ಗ್ರಾಮದ ಯಲ್ಲಮ್ಮ ಅವರ ಮನೆ ಮಳೆಯಿಂದ ಹಾನಿಗೀಡಾಗಿದ್ದು, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಸಂಡೂರಿನ ಜೀವನಾಡಿ ಎನಿಸಿಕೊಂಡಿರುವ ನಾರಿಹಳ್ಳ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಇಲ್ಲಿನ ಬೆಟ್ಟಗಳು ಹಸಿರಾಗುತ್ತಿವೆ. 

ಕಂಪ್ಲಿ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಸೋಮವಾರ ರಾತ್ರಿ 2.36ಸೆಂ.ಮೀ ಮಳೆ ಸುರಿದಿದ್ದು, 15ನೇ ವಾರ್ಡ್‌ನಲ್ಲಿ ನಿಂಗಪ್ಪ ಹನುಮಂತಪ್ಪ ಎನ್ನುವವರ ಮಣ್ಣಿನ ಮನೆಯ ಚಾವಣಿ ಕುಸಿದಿದೆ.

ಜಿಲ್ಲೆಯಲ್ಲಿ ಸೋಮವಾರ ಒಟ್ಟಾರೆ 0.49 ಸೆಂ.ಮೀಟರ್‌ನಷ್ಟು ಮಳೆಯಾಗಿದ್ದು, ಇದು ವಾಡಿಕೆಗಿಂತಲೂ ಅಧಿಕ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರವೂ ಮಳೆ ಮುಂದುವರಿದಿತ್ತು. 

ಸಂಡೂರಿನ ನಾರಿಹಳ್ಳ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದು 
ಸಂಡೂರಿನ ನಾರಿಹಳ್ಳ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT