ಬಳ್ಳಾರಿ: ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಗುರುವಾರದಿಂದ ಎರಡು ದಿನ ವಿಚಾರಣೆ ನಡೆಸಲಿದ್ದಾರೆ.
ಕೊಲೆ ಪ್ರಕರಣದಲ್ಲಿನ ಹಣದ ವಹಿವಾಟಿಗೆ ಸಂಬಂಧಿಸಿದಂತೆ ದರ್ಶನ್ ವಿಚಾರಣೆಗೆ ಕೋರ್ಟ್ ಆದೇಶ ನೀಡಿದೆ. ಅದರಂತೆ ತನಿಖೆ ನಡೆಸಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಸೆ.26 ಮತ್ತು 27ರಂದು ತನಿಖೆಗೆಂದು ಅಧಿಕಾರಿಗಳು ಬಳ್ಳಾರಿ ಜೈಲಿಗೆ ಬರಲಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
‘ದರ್ಶನ್ ಅವರ ವಿಚಾರಣೆಗೆ ಅವಕಾಶ ನೀಡುವಂತೆ ಕೋರಿ ಕೋರ್ಟ್ ಆದೇಶದೊಂದಿಗೆ ಆದಾಯ ತೆರಿಗೆ ಇಲಾಖೆಯಿಂದ ನಮಗೆ
ಇ–ಮೇಲ್ ಬಂದಿತ್ತು. ನಾವು ವಿಚಾರಣೆಗೆ ಅವಕಾಶ ನೀಡಿದ್ದೇವೆ’ ಎಂದು ಬಳ್ಳಾರಿ ಜೈಲು ಆಧೀಕ್ಷಕಿ ಲತಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ದರ್ಶನ್ ಅವರ ಪರ ವಕೀಲರು ಬುಧವಾರವೂ ಜೈಲಿಗೆ ಭೇಟಿ ನೀಡಿ 30 ನಿಮಿಷ ಚರ್ಚೆ ನಡೆಸಿದರು.