ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ರ ಪ್ರಕಾರ ಹರಿಯುವ ನೀರಿಗೆ ತಡೆಗೋಡೆ ನಿರ್ಮಿಸಿಕೊಂಡಿರುವುದು ನಿಯಮದ ಉಲ್ಲಂಘನೆಯಾಗಿದೆ. ಗ್ರಾಮ ಲೆಕ್ಕಾಧಿಕಾರಿ ಮತ್ತು ಕಂದಾಯ ನಿರೀಕ್ಷಕರು ಆಯಾ ಗ್ರಾಮ ವ್ಯಾಪ್ತಿಯ ಸರ್ಕಾರಿ ಜಮೀನು ಅತಿಕ್ರಮಣ, ಅಕ್ರಮ ಕಟ್ಟಡ ನಿರ್ಮಾಣ ತಡೆಯುವುದು ಅವರ ಕರ್ತವ್ಯವಾಗಿದ್ದು ಇಲ್ಲಿ ಅಧಿಕಾರಿಗಳು ತಮ್ಮ ಜವಬ್ದಾರಿ ಮರೆತಿದ್ದಾರೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಅಕ್ರಮ ಎಸಗಿರುವ ಕಂಪನಿ ವಿರುದ್ಧ ಕ್ರಮವಹಿಸಬೇಕೆಂದು ಜನ ಸಂಗ್ರಾಮ ಪರಿಷತ್ ಮುಖಂಡ ಶ್ರೀಶೈಲ ಆಲದಹಳ್ಳಿ ದೂರಿನಲ್ಲಿ ಒತ್ತಾಯಿಸಿದ್ದಾರೆ.