ವೀಲಿಂಗ್ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಹೊಸಪೇಟೆ (ವಿಜಯನಗರ): ನಗರದಲ್ಲಿ ಬೈಸಿಕಲ್, ಬೈಕ್ ವೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ಜಿಲ್ಲಾ ಘಟಕ ಆಗ್ರಹಿಸಿದೆ.
ಈ ಸಂಬಂಧ ವೇದಿಕೆಯ ಮುಖಂಡರು ಬುಧವಾರ ನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.
ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪುಂಡ ಹುಡುಗರು ಸೈಲೆನ್ಸರ್ ತೆಗೆದು ಬೈಕ್ ವೀಲಿಂಗ್ ಮಾಡುತ್ತಿದ್ದಾರೆ. ಅತಿ ವೇಗವಾಗಿ ವಾಹನ ಓಡಿಸುತ್ತಿದ್ದಾರೆ. ನಗರದ ಕಾಲೇಜು ರಸ್ತೆ, ಬಸ್ ನಿಲ್ದಾಣ ರಸ್ತೆ, ವಾಲ್ಮೀಕಿ ವೃತ್ತ, ಬೈಪಾಸ್‌ಗಳಲ್ಲಿ ವೀಲಿಂಗ್ ಮಾಡುವುದು ಹೆಚ್ಚಾಗಿದೆ. ಇದರಿಂದ ಅನೇಕ ಅಪಘಾತಗಳು ಸಂಭವಿಸಿವೆ. ಅನೇಕರ ಬಳಿ ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ವಾಹನಗಳನ್ನು ಬೇಕಾಬಿಟ್ಟಿ ಓಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ವಿಶೇಷ ತಂಡ ರಚಿಸಿ, ವೀಲಿಂಗ್ ಮಾಡುವವರ ವಿರುದ್ಧ ದಂಡ ಹೇರಿ ಕಾನೂನು ಕ್ರಮ ಜರುಗಿಸಬೇಕು. ವೀಲಿಂಗ್ ಮಾಡುವ ಹುಡುಗರ ಪೋಷಕರನ್ನು ಕರೆಸಿ ಎಚ್ಚರಿಕೆ ಕೊಡಬೇಕು. ಪದೇ ಪದೇ ವೀಲಿಂಗ್ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಮುಖಂಡರಾದ ಎನ್.ಎಚ್. ಶ್ರೀನಿವಾಸ, ಎಸ್.ಎಂ. ಜಾಫರ್, ರಾಮಕೃಷ್ಣ ಕಾರಿಗನೂರು, ಈಡಿಗರ ರಮೇಶ್, ಕೊಟ್ರೇಶ್, ಕಂಪ್ಲಿ ಲಕ್ಷ್ಮಣ, ರುದ್ರಪ್ಪ ಜೋಗಿ, ವಿರೂಪಾಕ್ಷಿ. ಟಿಪ್ಪು ಮಹಮ್ಮದ್, ಗಾಳೇಶ್, ಮಾರೇಶ್, ರವಿ, ಸೂರಿ ಲೋಕೇಶ್, ಈ. ಸ್ವಾಮಿ, ವೆಂಕಟೇಶ್ ರಾಜಶೇಖರ್, ಮೆಹಬೂಬ್ ಬಾಷ ಇತರರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.