ತೊಗರಿ ಬೆಳೆ ಹಾನಿಗೆ ಪರಿಹಾರ ನೀಡಲು ಆಗ್ರಹಿಸಿ ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಪ್ರತಿಭಟನೆಯ ಎರಡನೇ ದಿನವಾದ ಗುರುವಾರ ರೈತರೊಬ್ಬರು ಎತ್ತುಗಳ ನಡುವೆ ಕಂಡಿದ್ದು ಹೀಗೆ –ಪ್ರಜಾವಾಣಿ ಚಿತ್ರ
ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣವೇ ಆಂಧ್ರಪ್ರದೇಶದ ಮಾದರಿಯಲ್ಲಿ ಒಣಮೆಣಸಿನಕಾಯಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು. ರೈತರ ಹೋರಾಟಕ್ಕೆ ಸ್ಪಂದಿಸಬೇಕು
ಕರೂರು ಮಾಧವ ರೆಡ್ಡಿ ಅಧ್ಯಕ್ಷ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ
ಮುಂದುವರಿದ ತೊಗರಿ ಬೆಳೆಗಾರರ ಪ್ರತಿಭಟನೆ
ಕಲಬುರಗಿ: ಅತಿವೃಷ್ಟಿ ಹಾಗೂ ನೆಟೆರೋಗದಿಂದ ಹಾನಿಯಾದ ತೊಗರಿ ಬೆಳೆಗೆ ಪರಿಹಾರ ನೀಡುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಿಲ್ಲಾ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಗುರುವಾರವೂ ಮುಂದುವರಿಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರು ಭಜನೆ ಮಾಡುತ್ತ ಬುಧವಾರ ರಾತ್ರಿ ಕಳೆದಿದ್ದರು. ಕಚೇರಿ ಆವರಣ ಮುಖ್ಯರಸ್ತೆ ಹಾಗೂ ಎತ್ತುಗಳ ಬಳಿ ರೈತರು ಮಲಗಿಕೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದ ರಸ್ತೆಗಳಲ್ಲಿ ಬಂಡಿಗಳನ್ನು ನಿಲ್ಲಿಸಿ ಎತ್ತುಗಳನ್ನು ಕಟ್ಟಿ ಹಾಕಿದ್ದಾರೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ರೈತರು ಮೇವನ್ನು ಎತ್ತುಗಳಿಗೆ ಹಾಕಿ ನೀರು ಕುಡಿಸಿದರು. ತಾವು ಸಹ ಅಲ್ಲಿಯೇ ಅಡುಗೆ ಮಾಡಿ ಉಪಾಹಾರ ಊಟ ಸೇವಿಸಿದರು. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹಾಗೂ ಕೆಲ ಸ್ವಾಮೀಜಿಗಳು ಪ್ರತಿಭಟನಾ ಸ್ಥಳಕ್ಕೆ ಬಂದು ರೈತರ ಹೋರಾಟಕ್ಕೆ ಬೆಂಬಲ ಘೋಷಿಸಿದರು.