ಹೊಸಪೇಟೆ(ವಿಜಯನಗರ): ನಗರ ಹೊರವಲಯದ ಅನಂತಶಯನಗುಡಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಈಗಾಗಲೇ ಅನುದಾನ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಬೇಕೆಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಆಗ್ರಹಿಸಿದೆ.

ನಗರದ ರೈಲು ನಿಲ್ದಾಣದ ನವೀಕರಣ ಕಾಮಗಾರಿ ಪರಿಶೀಲನೆಗೆ ಬಂದಿದ್ದ ನೈರುತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಅರವಿಂದ ಮಳಖೇಡ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಎರಡು ವರ್ಷಗಳ ಹಿಂದೆ ಸಂಚಾರ ಆರಂಭಿಸಿರುವ ಹೊಸಪೇಟೆ-ಕೊಟ್ಟೂರು-ದಾವಣಗೆರೆ ರೈಲು ಮಾರ್ಗದಲ್ಲಿ ಏಕಕಾಲಕ್ಕೆ ಎರಡು ಕಡೆಯಿಂದ ನಿತ್ಯ ರೈಲು ಸೌಲಭ್ಯ ಕಲ್ಪಿಸಬೇಕು. ಅದಿರು ಸಾಗಾಣಿಕೆ ರೈಲುಗಳನ್ನು ಓಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು. ಈ ಮಾರ್ಗದಿಂದ ಇಲಾಖೆಗೆ ವಾರ್ಷಿಕ ₹200 ಕೋಟಿ ಆದಾಯವಿದ್ದರೂ ಪ್ರಯಾಣಿಕರ ಬೇಡಿಕೆಗೆ ಸ್ಪಂದನೆ ಸಿಗುತ್ತಿಲ್ಲ. ಹಗರಿಬೊಮ್ಮನಹಳ್ಳಿ ಎಲ್.ಸಿ. ಗೇಟ್ ನಿರ್ಮಿಸಬೇಕೆಂದು ಆಗ್ರಹಿಸಿದರು.

ಸಮಿತಿ ಅಧ್ಯಕ್ಷ ವೈ.ಯಮುನೇಶ್, ಕಾರ್ಯದರ್ಶಿ ಕೆ.ಮಹೇಶ್, ವಿಶ್ವನಾಥ ಕೌತಾಳ್, ಪ.ಯ.ಗಣೇಶ್, ಬಿ.ಕೆ.ಆಚಾರ್, ಲೋಗನಾಥನ್, ಹಗರಿಬೊಮ್ಮನಹಳ್ಳಿ ವಾಣಿಜ್ಯೋದಮ ಸಂಘದ ಅಧ್ಯಕ್ಷ ಎಸ್.ಎಂ.ಚಂದ್ರಯ್ಯ, ಕಾರ್ಯದರ್ಶಿ ಕೆ.ಗಿರಿರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.