ಸಂಡೂರು: ‘ರಾಜ್ಯದಲ್ಲಿನ ಒಂಟಿ ಮಹಿಳೆಯರ ಆರ್ಥಿಕ, ಸಾಮಾಜಿಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಯೋಜನೆಗಳನ್ನು ಜಾರಿಗೆ ತರಬೇಕು’ ಎಂದು ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ಸಂಘ ಕುರೆಕುಪ್ಪ ಘಟಕದ ಅಧ್ಯಕ್ಷೆ ಪಿ.ಪದ್ಮಾವತಿ ಹೇಳಿದರು.

ತಾಲ್ಲೂಕಿನ ಕುರೆಕುಪ್ಪ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ಸಂಘ, ರೈತ, ಕಟ್ಟಡ ಕಾರ್ಮಿಕ ಸಂಘಟನೆಯ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದಲ್ಲಿ ಮಾತನಾಡಿದರು.

‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರಾಜ್ಯದಲ್ಲಿನ ಒಂಟಿ ಮಹಿಳೆಯರಿಗೆ ವಸತಿ, ನಿವೇಶನ ಸೇರಿದಂತೆ ಇತರ ಮೂಲ ಸೌಲಭ್ಯ ಕಲ್ಪಿಸಬೇಕು. ರಾಜಕೀಯ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ಕಟ್ಟಡ ಕಾರ್ಮಿಕ ಫೆಡರೇಶನ್ ಜಿಲ್ಲಾ ಸಹ ಸಂಚಾಲಕ ವಿ.ದೇವಣ್ಣ, ಕರ್ನಾಟಕ ಪ್ರಾಂತ ರೈತ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಜಿ.ಪಂಪನಗೌಡ, ಮುಖಂಡರಾದ ಸರಸ್ವತಿ, ಎರ್ರಿಯಮ್ಮ, ಶಾಂತಮ್ಮ, ತಿಪ್ಪಮ್ಮ, ಮಲ್ಲಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.