ಬಳ್ಳಾರಿ: ಕೊಪ್ಪಳ ಜಿಲ್ಲೆಯ ಹೊಸಬಂಡಿ ಹರ್ಲಾಪುರ ಗ್ರಾಮದ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೇ, ಅತ್ಯಂತ ಕ್ರೂರವಾಗಿ ಹತ್ಯೆಗೈದ ದುಷ್ಕರ್ಮಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕರ್ನಾಟಕ ರಾಜ್ಯ ಎಸ್.ಸಿ., ಎಸ್.ಟಿ., ಅಲೆಮಾರಿ ಬುಡಕಟ್ಟು ಮಹಾಸಭಾ ಆಗ್ರಹಿಸಿದೆ.

ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ರವಾನಿಸಲಾಯಿತು. ಹತ್ಯೆಯಾದ ಬಾಲಕಿಯ ನೊಂದ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದರು.

ಮಹಾಸಭಾದ ಜಿಲ್ಲಾ ಅಧ್ಯಕ್ಷ ಶಿವಕುಮಾರ ಮಾತನಾಡಿ, ಪೊಲೀಸರು ಆರೋಪಿಯನ್ನು ಬಂಧಿಸಿರುವುದೇನೋ ಸರಿ. ಅರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಥವಾ ಹೆಚ್ಚಿನ ಶಿಕ್ಷೆಯನ್ನು ವಿಧಿಸಿ ರಾಜ್ಯದಲ್ಲಿ ಇನ್ನು ಮುಂದೆ ಇಂಥ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು’ ಎಂದರು.

ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಸುಬ್ಬಣ್ಣ, ಉಪಾಧ್ಯಕ್ಷ ಬಿ.ರಾಮಯ್ಯ, ಕಾರ್ಯಧ್ಯಕ್ಷ ರಾಮಾಂಜಿನಿ, ಜಿಲ್ಲಾ ಖಜಾಂಚಿ ಕೆ. ಚನ್ನಬಸಪ್ಪ, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್, ಜಿಲ್ಲಾ ಜಂಟಿ ಕಾರ್ಯದರ್ಶಿ ಶೈಲಾ ಸೀತಾರಾಮ್ ಇತರೆ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.