ಕಂಪ್ಲಿ: ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ವಿಧಾನ ಪರಿಷತ್ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಹಲ್ಲೆಗೆ ಕಾರಣರಾದ ಸಚಿವ ಪ್ರಿಯಾಂಕ ಖರ್ಗೆ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ನಾಯ್ಡು ಒತ್ತಾಯಿಸಿದರು.

ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾರಾಯಣಸ್ವಾಮಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿ ದೌರ್ಜನ್ಯಕ್ಕೆ ಮುಂದಾಗಿದ್ದರೂ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು’ ಎಂದು ದೂರಿದರು.

‘ಗೂಂಡಾಗಿರಿ, ದ್ವೇಷ ರಾಜಕಾರಣ ಮಾಡುವಲ್ಲಿ ಪ್ರಿಯಾಂಕ ಖರ್ಗೆಯವರು ಮುಂಚೂಣಿಯಲ್ಲಿದ್ದು, ರಿಪಬ್ಲಿಕ್ ಆಫ್ ಕಲಬುರಗಿ ಮಾಡಿಕೊಂಡಿದ್ದಾರೆ. ಖರ್ಗೆ ಕುಟುಂಬದ ಅಕ್ರಮ ಆಸ್ತಿಗಳ ಬಗ್ಗೆ ಹೋರಾಟ ನಡೆಸಿ, ಅಕ್ರಮ ಆಸ್ತಿಗಳ ವಿರುದ್ಧ ಧ್ವನಿ ಎತ್ತಿದ್ದ ಛಲವಾದಿಯವರ ಮೇಲೆ ಪೂರ್ವನಿಯೋಜಿತ ಮತ್ತು ರಾಜಕೀಯ ಪ್ರೇರಿತ ಮಾರಣಾಂತಿಕ ದಾಳಿಯಾಗಿದೆ’ ಎಂದು ಅರೋಪಿಸಿದರು.

‘ಘಟನೆ ಕುರಿತು ಗೃಹಸಚಿವರು, ಎಡಿಜಿಪಿ, ಎಸ್ಪಿಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮವಾಗಿಲ್ಲ. ಈ ಹಿಂದೆ ಸಿ.ಟಿ. ರವಿ ಅವರನ್ನು ಅನಧಿಕೃತವಾಗಿ ಬಂಧಿಸಿ ಅವರನ್ನು 800 ಕಿ.ಮೀ. ಸುತ್ತಾಡಿಸಿ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದರು. ಅಲ್ಲದೆ, ಶಾಸಕ ಬಸವರಾಜ ಮತ್ತಿಮುಡ್ ಅವರ ಮೇಲೂ ದೌರ್ಜನ್ಯ ಮೆರೆದಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮೇ 24ರಂದು ಪ್ರಿಯಾಂಕ್ ಖರ್ಗೆ ಹಠವೋ ಕಲಬುರಗಿ ಬಚಾವೋ ಅಭಿಯಾನ ಹಮ್ಮಿಕೊಂಡಿದ್ದು, ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕಂಪ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಿ.ಡಿ. ಮಹಾದೇವ, ಕುರುಗೋಡು ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ, ಪ್ರಮುಖರಾದ ಅಳ್ಳಳ್ಳಿ ವೀರೇಶ್, ಪಿ. ಬ್ರಹ್ಮಯ್ಯ, ಎನ್. ಪುರುಷೋತ್ತಮ, ಬಿ. ನಾಗೇಂದ್ರ, ಬಿ. ದೇವೇಂದ್ರ, ಹೂಗಾರ ರಮೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.