ಹೊಸಪೇಟೆ(ವಿಜಯನಗರ): ‘ರಾಜ್ಯದ ಜನತೆಗೆ ಅಗತ್ಯ ವಿಶೇಷ ಪ್ಯಾಕೇಜ್ ಘೋಷಿಸಬೇಕು. ನಿಷೇಧಾಜ್ಞೆ ಘೋಷಿಸಿರುವುದರಿಂದ ಅವರು ಸಂಕಷ್ಟಕ್ಕೆ ಒಳಗಾಗಿದ್ದು, ನೆರವಿಗೆ ಧಾವಿಸುವುದು ಸರ್ಕಾರದ ಕರ್ತವ್ಯ’ ಎಂದು ಡಿವೈಎಫ್ಐ ತಾಲ್ಲೂಕು ಅಧ್ಯಕ್ಷ ಈಡಿಗರ ಮಂಜುನಾಥ ಆಗ್ರಹಿಸಿದ್ದಾರೆ.

‘ಕೊರೊನಾ ಸೋಂಕು ಹರಡದಂತೆ ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿವೆ. ಈ ಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರೂ ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ. ಅದರ ಬೆಲೆ ಜನಸಾಮಾನ್ಯರು ತೆರಬೇಕಾಗುತ್ತಿದೆ’ ಎಂದು ಹೇಳಿದ್ದಾರೆ.

‘ರೈತರಿಗೆ ಕೃಷಿ ಚಟುವಟಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಮದುವೆ ಸೇರಿದಂತೆ ಇತರೆ ಸಮಾರಂಭ ನಡೆಸಲು ಆಗುತ್ತಿಲ್ಲ. ಅನೇಕರು ಬ್ಯಾಂಕುಗಳಲ್ಲಿ ಸಾಲದ ಸುಳಿಗೆ ಸಿಲುಕಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಇಲ್ಲದರಿಂದ ಮತ್ತಷ್ಟು ತೊಂದರೆಗೆ ಒಳಗಾಗಿದ್ದಾರೆ. ವಿಶೇಷ ಪ್ಯಾಕೇಜ್ ಮೂಲಕ ಸರ್ಕಾರ ನೆರವಿಗೆ ಬರಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.