ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶೈಕ್ಷಣಿಕ ಸಮಸ್ಯೆ ಪರಿಹರಿಸಲು ಒತ್ತಾಯ

Published : 2 ಸೆಪ್ಟೆಂಬರ್ 2024, 15:55 IST
Last Updated : 2 ಸೆಪ್ಟೆಂಬರ್ 2024, 15:55 IST
ಫಾಲೋ ಮಾಡಿ
Comments

ಹೊಸಪೇಟೆ(ವಿಜಯನಗರ): ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹಲವು ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಎಸ್‍ಎಫ್‍ಐ ಸಂಘಟನೆಯ ಪದಾಧಿಕಾರಿಗಳು ನಗರದ ಶಂಕರ್ ಆನಂದ್‍ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪದಾಧಿಕಾರಿಗಳು, ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹಲವು ಶೈಕ್ಷಣಿಕ ಸಮಸ್ಯೆಗಳಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡುವುದರ ಜೊತೆಗೆ ವಿದ್ಯಾರ್ಥಿಗಳ ದೋಷಪೂರಿತ ಫಲಿತಾಂಶ ಸರಿಪಡಿಸಿ ಸರಿಯಾದ ಫಲಿತಾಂದ ಪ್ರಕಟಿಸಬೇಕು.

ಅಲ್ಲದೆ ವಿದ್ಯಾರ್ಥಿಗಳ ಅಂಕಪಟ್ಟಿ ನೀಡುವುದರ ಜೊತೆಗೆ ವಿದ್ಯಾರ್ಥಿಗಳು ಮೊದಲು ಉತ್ತೀರ್ಣರಾಗಿ ನಂತರ ಅನುತ್ತೀರ್ಣ ಎಂದು ತೋರಿಸುವ ವಿಷಯಗಳಿಗೆ ಪರೀಕ್ಷಾ ಶುಲ್ಕವನ್ನು ಕಟ್ಟುವುದರ ಬಗ್ಗೆ ಕೂಲೇ ಸ್ಪಷ್ಟತೆ ನೀಡುವುದರ ಜೊತೆಗ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕ ಸಭೆ ಕರೆಯಬೇಕೆಂದು ಒತ್ತಾಯಿಸಿದರು.

ಸಂಘಟನೆಯ ಲಕ್ಷ್ಮಿ ಬೂನಹಳ್ಳಿ, ಅನಿಲ್‍ಕುಮಾರ್, ಶಿವಾರೆಡ್ಡಿ, ಶಾರದ, ಖುಷಿ, ಲೋಕೇಶ್, ಪವನ್, ಸಹನಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT