ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿಗೆ ನೂತನ ಎಸ್‌ಪಿ ಶೋಭಾ ರಾಣಿ

Published 3 ಜುಲೈ 2024, 4:59 IST
Last Updated 3 ಜುಲೈ 2024, 4:59 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯನ್ನಾಗಿ ಡಾ. ಶೋಭಾ ರಾಣಿ ವಿ.ಜಿ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಮಂಗಳವಾರ ರಾತ್ರಿ ಆದೇಶ ಹೊರಡಿಸಿದೆ. 

ಸದ್ಯದ ಎಸ್‌ಪಿ ರಂಜಿತ್‌ ಕುಮಾರ್‌ ಬಂಡಾರು ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ, ಸದ್ಯಕ್ಕೇ ಯಾವುದೇ ಸ್ಥಾನ ತೋರಿಸಿಲ್ಲ. ಅವರು ಪೊಲೀಸ್ ಪ್ರಧಾನ ಕಚೇರಿಗೆ ವರದಿ‌ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಶೋಭಾ ರಾಣಿ ಅವರ ನೇಮಕವು ತಕ್ಷಣದಿಂದ ಜಾರಿಗೆ ಬರಲಿದೆ ಎಂದು ವರ್ಗಾವಣೆ ಆದೇಶದಲ್ಲಿ ಸರ್ಕಾರ ಹೇಳಿದೆ. 

ಶೋಭಾ ರಾಣಿ ಸದ್ಯ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್‌) ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.  ತುಮಕೂರು ಜಿಲ್ಲೆಯಲ್ಲಿ ಎಸ್‌ಪಿಯಾಗಿದ್ದರು. ಮಂಡ್ಯ, ಹಾಸನದಲ್ಲಿ ಹೆಚ್ಚುವರಿ ಎಸ್‌ಪಿಯಾಗಿದ್ದರು. ಎಸಿಬಿ, ಸಿಐಡಿಯಲ್ಲೂ ಅವರು ಕೆಲಸ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT