ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ: ಕುದಿಸಿ, ಆರಿಸಿದ ನೀರು ಕುಡಿಯಲು ಡಿಎಚ್‍ಒ ಸಲಹೆ

Published 30 ಜೂನ್ 2024, 15:28 IST
Last Updated 30 ಜೂನ್ 2024, 15:28 IST
ಅಕ್ಷರ ಗಾತ್ರ

ಬಳ್ಳಾರಿ: ಕಲುಷಿತ ನೀರಿನಿಂದ ಮತ್ತು ಕಲುಷಿತ ಆಹಾರ ಸೇವನೆಯಿಂದ ವಾಂತಿ–ಬೇಧಿ, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಕುದಿಸಿ, ಆರಿಸಿ, ಸೋಸಿದ ನೀರು ಕುಡಿಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ತಿಳಿಸಿದರು.

ಬಳ್ಳಾರಿ ತಾಲ್ಲೂಕಿನ ವೈ. ಕಗ್ಗಲ್ ಗ್ರಾಮದಲ್ಲಿ ಇತ್ತೀಚೆಗೆ ಶಂಕಿತ ವಾಂತಿ ಬೇಧಿ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು. 

ವಾಂತಿ ಭೇದಿ ಪ್ರಕರಣಗಳು ಕಾಣಿಸಿಕೊಂಡಾಗ ಒಂದು ಲೀಟರ್‌ ನೀರಿಗೆ ಒಆರ್‌ಎಸ್‌ ಪುಡಿ ಹಾಕಿ, ಮಿಶ್ರಣ ಮಾಡಿ ಕುಡಿಯಬೇಕು ಎಂದು ಅವರು ಹೇಳಿದರು.

ಕಲುಷಿತ ನೀರಿನ ಸೇವನೆಯಿಂದ ಸಾಮಾನ್ಯವಾಗಿ ವಾಂತಿ-ಬೇದಿ, ಕಾಲರಾ, ಟೈಪಾಯಿಡ್, ಹೆಪಟೈಟಸ್-ಎ, ಗಿಯಾರ್ಡಿಯಾ, ಸಾಲ್ಮೋನೆಲ್ಲಾ ಶಿಗೆಲ್ಲೋಸಿಸ್, ಅಮೀಬಿಯಾಸಿಸ್, ಇ-ಕೋಲಿ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ತಿಳಿಸಿದರು. 

ತಂಗಳು ಆಹಾರ ಸೇವಿಸಬಾರದು. ತಯಾರಿಸಿದ ಅಹಾರದ ಮೇಲೆ ಮುಚ್ಚಳ ಮುಚ್ಚಬೇಕು. ಕುಡಿಯುವ ನೀರು ತುಂಬಿದ ನಂತರ ಪಾತ್ರೆಗಳಿಗೆ ಮುಚ್ಚಳ ಹಾಕಬೇಕು. ಆದಷ್ಟು ನಳ ಇರುವ ಪಾತ್ರೆಗಳನ್ನು ಬಳಸಿ. ನೀರಿನಲ್ಲಿ ಕೈ ಇಡಬಾರದು. ಮಲ-ಮೂತ್ರ ವಿಸರ್ಜನೆಗಾಗಿ ಶೌಚಾಲಯಗಳನ್ನೇ ಬಳಸಬೇಕು ಎಂದು ಅವರು ಇದೇ ವೇಳೆ ಸಲಹೆ ನೀಡಿದರು. 

ವಾಂತಿ-ಭೇದಿ ಅಥವಾ ಕಾಲರಾ ಸೋಂಕಿತರಿಗೆ ಮನೆಯಲ್ಲಿಯೆ ತಯಾರಿಸಿದ ಗಂಜಿ, ಬೇಳೆ ತಿಳಿ, ನಿಂಬೆ ಪಾನಕ ಹಾಗೂ ಎಳೆನೀರು ಕೊಡುವುದನ್ನು ನಿಲ್ಲಿಸಬಾರದು. ಊಟದ ಮೊದಲು ಹಾಗೂ ಶೌಚದ ನಂತರ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತಪ್ಪದೇ ತೊಳೆಯಬೇಕು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT