ಸಂಡೂರು: ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ಹಾಗೂ ಇತರೆ ರೈತರಿಗೆ ಶೇ 75ರಷ್ಟು ಸಹಾಯಧನವನ್ನು ಗರಿಷ್ಠ 2 ಹೆಕ್ಟೇರ್‌ವರೆಗೆ ನೀಡಲಾಗುತ್ತಿದೆ. ಆಸಕ್ತ ರೈತರು ಅರ್ಜಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಹನುಮಪ್ಪ ನಾಯಕ ಜರಕುಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿಗೆ ರೈತ ಸಂಪರ್ಕ ಕೇಂದ್ರಗಳಾದ ಸಂಡೂರು– ಮೊ: 9844819436, ತೋರಣಗಲ್ಲು- ಮೊ: 9901122827, ಚೋರನೂರು– ಮೊ: 7892976564 ಸಂಪರ್ಕಿಸಬಹುದು.