ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಮಾದಕ ವಸ್ತು ಬಳಕೆ, ಅಕ್ರಮ ಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ

Published 26 ಜೂನ್ 2023, 5:40 IST
Last Updated 26 ಜೂನ್ 2023, 5:40 IST
ಅಕ್ಷರ ಗಾತ್ರ

ಬಳ್ಳಾರಿ: ಅಂತರರಾಷ್ಟ್ರೀಯ ಮಾದಕ ಪದಾರ್ಥ ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಸೋಮವಾರ ನಗರದಲ್ಲಿ ಜಾಗೃತಿ ಜಾಥಾ ನಡೆಯಿತು.

ಜಾಥಾಕ್ಕೆ ನಗರ ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ಮಂಜುನಾಥ್ ಚಾಲನೆ ನೀಡಿದರು.

ಜಿಲ್ಲಾಡಳಿತ ಭವನದಿಂದ ಆರಂಭವಾದ ಜಾಗೃತಿ ಜಾಥಾು ಇಂದಿರಾ ಸರ್ಕಲ್, ಗಡಿಗಿ ಚನ್ನಪ್ಪ ಸರ್ಕಲ್ ಜಿಲ್ಲಾಧಿಕಾರಿ ಕಚೇರಿ ಮೂಲಕ ರೈಲ್ವೆ ನಿಲ್ದಾಣ ಬಳಸಿ ಜಿಲ್ಲಾಡಳಿತ ಭವನದ ಬಳಿ ಕೊನೆಗೊಂಡಿತು.

ಇದಕ್ಕೂ ಮುನ್ನ ಮಂಜುನಾಥ್ ಮಾತನಾಡಿ, ಸಮಾಜದಲ್ಲಿ ಮಾದಕ ವ್ಯಸನವನ್ನು ಹೋಗಲಾಡಿಸುವುದು ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಯುವ ಜನತೆ ಇಂತಹ ವ್ಯಸನಗಳಿಗೆ ದಾಸರಾಗದೆ, ತಮ್ಮ ಭವಿಷ್ಯದತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾ ಹಾಗೂ ಇತರ ಕಾರ್ಯಕ್ರಮಗಳನ್ನು ಸರಕಾರ ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ ಎಂದೂ ಹೇಳಿದರು.

ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳಾದ ಅನಿಲ್ ಕುಮಾರ್, ಬಸಪ್ಪ ಪೂಜಾರ್ ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT