ಬಳ್ಳಾರಿ : ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕ ನಾಗೇಂದ್ರ ಆಪ್ತರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ, ಈರಣ್ಣ, ಅಲ್ಲಾ ಬಕಾಶ್ ಮತ್ತು ಇತರರ ಮನೆಗಳಲ್ಲಿ ಶೋಧ ನಡೆಯುತ್ತಿದೆ.
ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಯಿತು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬಳ್ಳಾರಿ ಮಾತ್ರವಲ್ಲದೇ ಕೊಪ್ಪಳ, ರಾಯಚೂರಿನಲ್ಲಿಯೂ ದಾಳಿ ನಡೆದಿದೆ.