ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರುಗೋಡು: ಸರ್ಕಾರಿ ಜಾಹೀರಾತು ಫಲಕ ತೆರವು

Published 17 ಮಾರ್ಚ್ 2024, 12:41 IST
Last Updated 17 ಮಾರ್ಚ್ 2024, 12:41 IST
ಅಕ್ಷರ ಗಾತ್ರ

ಕುರುಗೋಡು: ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಇಲ್ಲಿನ ಪುರಸಭೆ ಸಿಬ್ಬಂದಿ ಪಟ್ಟಣದ ವಿವಿಧ ಆಯಕಟ್ಟಿನ ಸ್ಥಳದಲ್ಲಿ ಅಳವಡಿಸಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ವಿವಿಧ ಯೋಜನೆಗಳ ಜಾಹಿರಾತು ಫಲಕಗಳು ಮತ್ತು ವಿವಿಧ ಪಕ್ಷದ ಪ್ರಚಾರ ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ಶನಿವಾರ ಪುರಸಭೆ ಸಿಬ್ಬಂದಿ ತೆರುವುಗೊಳಿಸಿದರು.

ತಹಶೀಲ್ದಾರ್ ಎಂ.ರೇಣುಕಾ, ಪುರಸಭೆ ಮುಖ್ಯಾಧಿಕಾರಿ ತಿಮ್ಮಪ್ಪ ಜಗಲಿ, ಕಂದಾಯ ನಿರೀಕ್ಷಕ ಸುರೇಶ್, ಹಿರಿಯ ಆರೋಗ್ಯ ನಿರೀಕ್ಷಕ ಸಾಳೇರು ಯುವರಾಜ, ಕಿರಿಯ ಆರೋಗ್ಯ ನಿರೀಕ್ಷಕಿ ಶಾರದಾ ಮತ್ತು ಸ್ವಚ್ಛತಾ ಸಿಬ್ಬಂದಿ ಜೆಸಿಬಿ ಯಂತ್ರದ ಸಹಾಯದೊಂದಿಗೆ ಪಟ್ಟಣದ ಪುರಸಭೆ ಮುಂಭಾಗ, ಸಾರ್ವಜನಿಕ ಸ್ಮಶಾನದ ರಸ್ತೆ, ತೇರುಬೀದಿ, ಮುಖ್ಯ ವೃತ್ತ ಮತ್ತು ಪಟ್ಟಣದ ಮೂರು ದಿಕ್ಕುಗಳಲ್ಲಿ ಸ್ವಾಗತ ಕಮಾನುಗಳಲ್ಲಿನ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದರು.

ಪುರಸಭೆ ಅನುಮತಿ ಇಲ್ಲದೇ ಯಾವುದೇ ಜಾಹೀರಾತು ಅಥವಾ ಪ್ರಚಾರ ಬ್ಯಾನರ್‌ಗಳನ್ನು ಅಳವಡಿಸುವಂತಿಲ್ಲ. ಅನುಮತಿ ಇಲ್ಲದೆ ಅಳವಡಿಸಿದರೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ತಿಮ್ಮಪ್ಪ ಜಗಲಿ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT