ಬಳ್ಳಾರಿ: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಅ.13 ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವಿ ಪ್ರವೀಣ್ ತಿಳಿಸಿದ್ದಾರೆ.

ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪ ಹಾಗೂ ಇತ್ಯಾದಿಗಳನ್ನು ಅಂಚೆ ಪತ್ರದ ಮೂಲಕ ಅ.10 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.