ಬಳ್ಳಾರಿ: ‘ಪ್ರತಿಯೊಬ್ಬರೂ ಸ್ವ ಉದ್ಯೋಗ, ಸ್ವಾವಲಂಬನೆ ಮತ್ತು ಸ್ವ-ದುಡಿಮೆಗಾಗಿ ಉದ್ಯೋಗ ಸೃಷ್ಠಿಸುವಂತರಾಗಬೇಕು’ ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ಕರೆ ನೀಡಿದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ‘ಬಳ್ಳಾರಿ ಚೇಂಬರ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್’ ನಿಂದ ಪ್ರಧಾನ ಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆಯಡಿ ‘ಟ್ಯಾಲಿ ಪ್ರೈಮ್’ ಮತ್ತು ‘ಹೋಟಲ್ ಮೇನೇಜ್ಮೆಂಟ್’ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಪ್ರಮಾಣಪತ್ರ ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

‘ಯುವಕರು ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು. ಸಾಧಿಸಲು ಪ್ರತಿಯೊಬ್ಬರೂ ಪ್ರಯತ್ನಿಸಿವಆಕಹ. ಮುಂದಿನ ಪೀಳಿಗೆಗೆ ಆದರ್ಶ ಮಾರ್ಗದರ್ಶಕರು ಮತ್ತು ಪ್ರೇರಣೆ ನೀಡುವವರಂತಾಗಬೇಕು’ ಎಂದು ಜಿಲ್ಲಾಧಿಕಾರಿ ಹೇಳಿದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮಾತನಾಡಿ ‘ಟ್ಯಾಲಿ ಪ್ರೈಮ್ ಬೇಸಿಕ್ ಕಂಪ್ಯೂಟರ್ನಲ್ಲಿ 200 ಅಭ್ಯರ್ಥಿಗಳು, ಹೋಟಲ್ ಮ್ಯಾನೇಜ್ ಮೆಂಟ್ನಲ್ಲಿ 50 ಅಭ್ಯರ್ಥಿಗಳು ತರಬೇತಿ ಪಡೆದಿದ್ದು, ಆಸಕ್ತರಿಗೆ ಅಪ್ರೆಂಟಿಸ್ಶಿಪ್ ನೀಡಲು ವ್ಯವಸ್ಥೆ ಮಾಡಲಾಗಿದೆ’ ಎಂದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ.ಮರ್ಚೇಡ್ ಮಲ್ಲಿಕಾರ್ಜುನಗೌಡ ಮಾತನಾಡಿ, ‘ಹೋಟಲ್ ಮ್ಯಾನೇಜ್ ಮೆಂಟ್ ಕೋರ್ಸ್ ತರಬೇತಿ ಪಡೆದಲ್ಲಿ ಈ ಕ್ಷೇತ್ರದಲ್ಲಿ ಅವಕಾಶಗಳಿಗೆ ಕೊನೆಯಿಲ್ಲ’ ಎಂದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಅವ್ವಾರು ಮಂಜುನಾಥ, ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಜಂಟಿ ಕಾರ್ಯದರ್ಶಿ ವಿ. ರಾಮಚಂದ್ರ, ಚೇಂಬರ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನ ನಾಗಳ್ಳಿ ರಮೇಶ್, ಕೆ.ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.